Please assign a menu to the primary menu location under menu

CrimeNEWSನಮ್ಮರಾಜ್ಯ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಹಾಯ ಕೇಳಲು ಹೋದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪಗೆ ಈ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಈ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

ಸಹಾಯ ಕೇಳಲು ಯಡಿಯೂರಪ್ಪ ಮನೆಗೆ ನಾವು ಫೆ.2ರಂದು ಹೋಗಿದ್ದೆವು. ಈ ವೇಳೆ ಅವರು ಸುಮಾರು 9 ನಿಮಿಷಗಳು ನಮ್ಮ ಬಳಿ ಮಾತನಾಡಿದರು. ನಂತರ ನನ್ನ ಮಗಳ ಕೈ ಹಿಡಿದುಕೊಂಡು ರೂಂಗೆ ಕರೆದುಕೊಂಡು ಹೋಗಿ ಡೋರ್ ಲಾಕ್ ಮಾಡಿ ಐದು ನಿಮಿಷ‌ ಬಿಟ್ಟು ಹೊರಗೆ ಬಂದ್ರು.‌ ಈ ವೇಳೆ ನನ್ನ ಮಗಳ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂದು ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ತೆರಳಿ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಪೊಲೀಸರು ಫೋಕ್ಸೋ ಕಾಯ್ದೆ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್ 354 (a) ಅಡಿ ಪ್ರಕರಣ ದಾಖಲಿಸಿಕೊಂಡಿದ್ದು. ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ