NEWSನಮ್ಮರಾಜ್ಯ

ಶಕ್ತಿ ಯೋಜನೆ ನಿಲ್ಲಲ್ಲ SO ರಾಜ್ಯದ ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಹೀಗಾಗಿ ರಾಜ್ಯ ಮಹಿಳೆಯರು ಆತಂಕಕ್ಕೆ ಒಳಗಾಗುವ ಅಗತ್ಯ ಬರುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಶಕ್ತಿ ಯೋಜನೆ ನಿಲ್ಲುತ್ತದೆ ಎಂಬ ಊಹಪೋಹಗಳಿಗೆ ಸ್ಪಷ್ಟನೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ (Congress Government) ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ ಎಂದು ಹೇಳಿದರು.

ಇನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡುವುದಕ್ಕೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ.  ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಕ್ತಿ ಯೋಜನೆಗಾಗಿ ಬಜೆಟ್‌ ನಲ್ಲಿ ಸುಮಾರು 5,500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ  ಆಗುವುದಿಲ್ಲ. ಅಂದಮೇಲೆ ನೀವು ಆತಂಕ ಪಡುವುದು ಏತಕ್ಕೆ ಎಂದು ಪ್ರಶ್ನಿಸಿದರು.

ಇನ್ನು ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತದೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು  ಸ್ಪಷ್ಟ ಪಡಿಸಿದರು.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ