NEWSಬೆಂಗಳೂರುರಾಜಕೀಯ

5 ಗ್ಯಾರಂಟಿಗಳ ಪೂರೈಸಲು ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ನಿರ್ಧಾರ ನಾಚಿಕೆಗೇಡಿನ ಪರಮಾವಧಿ : ಜಗದೀಶ್ ವಿ.ಸದಂ

ಯಾವುದೇ ಕಾರಣಕ್ಕೂ ಬಿಬಿಎಂಪಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಬಿಡುವುದಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿಗಳನ್ನು ಪೂರೈಸಲು ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಕೈಗೊಂಡಿರುವ ನಿರ್ಧಾರ ನಿಜಕ್ಕೂ ನಾಚಿಕೆಗೇಡಿತನದ ಪರಮಾವಧಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಕಿಡಿಕಾರಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಎಲ್ಲಿಯೂ ಶೂನ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇಲ್ಲ. ಇನ್ನು ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸಾಧಿಸಿ ರಾಜಸ್ವ ಸಂಗ್ರಹ ಹೆಚ್ಚಿಸಿ, ಸಂಪನ್ಮೂಲ ಕ್ರೋಡೀಕರಣಗೊಳಿಸುವ ತಾಕತ್ತು ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು.

ಚುನಾವಣಾ ಅಕ್ರಮಗಳಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ವ್ಯಯ ಮಾಡಿರುವ ಕಾಂಗ್ರೆಸ್ ಪಕ್ಷ ಒಂದು ಕಡೆಯಾದರೆ, ಈ ಇಂದಿನ ಬಿಜೆಪಿ ಸರ್ಕಾರ 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರ್ಬಾದ್ ಮಾಡಿದೆ. ಕಾಂಗ್ರೆಸ್ ಸರ್ಕಾರವು ಯಾವುದೇ ಸಾಲಗಳನ್ನು ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ ಜಗದೀಶ್ ವಿ.ಸದಂ ಪ್ರಶ್ನೆಸಿದರು.

ಒಂದು ಕೈಯಲ್ಲಿ ಉಚಿತ ಕೊಡುಗೆಗಳನ್ನು ನೀಡಿ ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ರೀತಿಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಿದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ತೀವ್ರ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಸರ್ಕಾರವನ್ನು ಎಚ್ಚರಿಸಿದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?