Please assign a menu to the primary menu location under menu

NEWSಆರೋಗ್ಯಸಿನಿಪಥ

ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ. ಜತೆಗೆ ಕ್ಯಾನ್ಸರ್‌ನಿಂದ ಮುಕ್ತರಾಗಿರುವ ಕುರಿತು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಅಮೆರಿಕದಿಂದಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ಶಿವಣ್ಣ ದಂಪತಿ ರವಾನಿಸಿದ್ದಾರೆ. ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ ಮಾಡಿದ ಪ್ರಾರ್ಥನೆಯಿಂದ ಶಿವರಾಜ್‌ಕುಮಾರ್‌ ಎಲ್ಲ ರಿಪೋರ್ಟ್‌ ನೆಗೆಟಿವ್‌ ಬಂತು. ಅವರೀಗ ಕ್ಯಾನ್ಸರ್‌ ಫ್ರೀ ಅಂತ ವೈದ್ಯರು ಅಫಿಷಿಯಲಿ ಹೇಳಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ. ಇದನ್ನೂ ನಾನು ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.

ಬಳಿಕ ಶಿವಣ್ಣ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಭಯ ಆಗುತ್ತೆ ಮಾತನಾಡಬೇಕಾದರೆ, ಎಲ್ಲಿ ಎಮೋಷನಲ್‌ ಆಗಿ ಬಿಡ್ತೀನಿ ಅಂತ. ಇಲ್ಲಿಂದ ಹೋಗುವಾಗ ಎಮೋಷನಲ್‌ ಆಗಿದ್ದೇ, ಭಯ ಅನ್ನೋದು ಇದ್ದೇ ಇರುತ್ತದೆ. ಆ ಭಯ ಕಮ್ಮಿ ಮಾಡೋಕೆ ಎಂದೇ ಅಭಿಮಾನಿ ದೇವರುಗಳಿದ್ದಾರೆ.

ವೈದ್ಯರು ನನ್ನ ನೋಡಿಕೊಂಡ ರೀತಿಯಿಂದ ಇನ್ನಷ್ಟು ಧೈರ್ಯ ಬಂತು. ’45’ ಚಿತ್ರದ ಶೂಟಿಂಗ್‌ ಮಾಡುವಾಗ ಕಿಮೋ ಥೆರಾಫಿಯಲ್ಲಿ ಕೆಲಸ ಮಾಡಿದ್ದೀನಿ. ಕ್ಲೈಮ್ಯಾಕ್ಸ್‌ ಫೈಟ್‌ ಎಲ್ಲ ಮಾಡಿದ್ದೇನೆ ಎಂದು ನಟ ಹಂಚಿಕೊಂಡರು.

ಅಮೆರಿಕಗೆ ಚಿಕಿತ್ಸೆಗೆ ಹೊರಡುವ ಡೇಟ್‌ ಹತ್ತಿರ ಬಂದಾಗ ಸ್ವಲ್ಪ ಒತ್ತಡ ಜಾಸ್ತಿ ಆಯಿತು. ಆದರೆ ಸದಾ ಪತ್ನಿ ಗೀತಾ ಮತ್ತು ಮಗಳು ನಿವಿ ನನ್ನ ಜೊತೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಯಾವುದೇ ಒತ್ತಡಕ್ಕೂ ಒಳಗಾಗದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಚಿಕಿತ್ಸೆ ಮಾಡಿದ ವೈದ್ಯ ಮನೋಹರ್‌ ಅವರು ಮಗುವಿನಂತೆ ನನ್ನ ನೋಡಿಕೊಂಡರು. ಯೂರಿನರಿ ಬ್ಲಾಡ್‌ ತೆಗೆದು ಹೊಸದು ಬ್ಲಾಡ್‌ ಹಾಕಿದ್ದಾರೆ. ಯಾರು ಗಾಬರಿ ಆಗಬೇಡಿ ನಾನು ಆರಾಮ ಆಗಿದ್ದೇನೆ. ಐ ವಿಲ್‌ ಬಿ ಬ್ಯಾಕ್‌, ಡಬಲ್‌ ಪವರ್‌ನೊಂದಿಗೆ ಬರುತ್ತೇನೆ. ಎಲ್ಲ ನನ್ನ ಅಭಿಮಾನಿ ದೇವರುಗಳಿಗೂ ಧನ್ಯವಾದಗಳು ಎಂದು ಶಿವಣ್ಣ ಹೇಳಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...