ಬೆಂಗಳೂರು: ಇಡೀ ರಾತ್ರಿ ಮೊಬೈಲ್ ಚಾರ್ಜ್‌ಗೆ ಇಟ್ಟು ಹೋಗಿದ್ದ ಮೊಬೈಲ್ ಅಂಗಡಿ ಬಂದ್ ಮಾಡಿಕೊಂಡು ಹೋಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಮೊಬೈಲ್ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ನಗರದಲ್ಲಿ ನಡೆದಿದೆ.
ವಿಜಯನಗರದಲ್ಲಿ ಈ ಘಟನೆ ನಡೆದಿದ್ದು, ಅಂಗಡಿ ಮಾಲೀಕ ರಾತ್ರಿ ಮೊಬೈಲ್ ಚಾರ್ಜ್ ಇಟ್ಟು ಮನೆಗೆ ಹೋಗಿದ್ದರು. ಇಂದು ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಮಾಲೀಕನಿಗೆ ಶಾಕ್ ಆಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಘಟನೆ ತಮ್ಮ ಮನೆಗಳಲ್ಲಿ ನಡೆಯಬಾರದು ಎಂದರೆ ಇಡೀ ರಾತ್ರಿ ಮೊಬೈಲ್ ಚಾರ್ಜ್‌ಗೆ ಇಟ್ಟು ಮಲಗುವವರು ಎಚ್ಚರ ವಹಿಸುವುದು ಅಗತ್ಯವಾಗಿದೆ.