NEWSನಮ್ಮಜಿಲ್ಲೆನಮ್ಮರಾಜ್ಯ

KSRTCಯಲ್ಲಿ ಸಿಬ್ಬಂದಿ  ಕೊರತೆ: ನಾಲ್ಕು ವರ್ಷದಿಂದ ಹೊಸ ನೇಮಕ ಪ್ರಕ್ರಿಯೆ ನಡೆದಿಲ್ಲ

ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಪ್ರಮುಖ ಕಾರಣ ಹಳೇ ಬಸ್‌ಗಳು ಕೆಟ್ಟು ಹೋಗುತ್ತಿರುವುದು ಮತ್ತು ನಿಗಮಕ್ಕೆ ಹೊಸದಾಗಿ ನೌಕರರ ನೇಮಕ ಪ್ರಕ್ರಿಯೆ ನಡೆಯದಿರುವುದು. ಹೀಗಾಗಿ ರಾಜ್ಯಾದ್ಯಂತ ಪ್ರಯಾಣಿಕರ ಜತೆಗೆ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಭಾಗದವರು ಹೆಚ್ಚು ತೊಂದರೆಗೆ ಸಿಲುಕುತ್ತಿದ್ದಾರೆ.

ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಸಿಬ್ಬಂದಿ ಕೊರತೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿವೃತ್ತಗೊಂಡವರು ತಿಂಗಳ ಕೊನೆಯಲ್ಲಿ ಮನೆಗೆ ಹೋಗುತ್ತಿರುವುದು ಒಂದುಕಡೆಯಾದರೆ, ಕೆಲ ಅಧಿಕಾರಿಗಳು ಲಂಚದ ಹಿಂದೆ ಬಿದ್ದು ನಿಷ್ಠಾವಂತ ನೌಕರರನ್ನು ಅಮಾನತು ಮಾಡಿಸುವ ಹುನ್ನಾರ ಮಾಡುತ್ತಿರುವುದು ಇನ್ನೊಂದು ಕಡೆ. ಹೀಗೆ ಹತ್ತು ಹಲವು ಸಮಸ್ಯೆಯಿಂದ ಸಾರಿಗೆ ನಿಗಮಗಳ ಬಸ್‌ಗಳು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸಿಗದಂತಾಗುತ್ತಿವೆ.

ಕೆಲ ಬಸ್‌ಗಳು ರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿರುವುದರಿಂದ ಸಾಮಾನ್ಯ ಬಸ್‌ಗಳ ಅಲಭ್ಯತೆ ಹಾಗೂ ಅಸಮರ್ಪಕ ಸೇವೆ ಹೆಚ್ಚಾಗಿ ಗ್ರಾಮೀಣ ಭಾಗಗಳಲ್ಲಿ ತಲೆದೋರುತ್ತಿದೆ. ಇನ್ನು ಶಿಕ್ಷಣ ಸಂಸ್ಥೆಗಳಿರುವ ನಿಗದಿತ ಸ್ಥಳಗಳಲ್ಲಿ ಬಸ್‌ಗಳನ್ನು ನಿಲುಗಡೆ ಮಾಡದ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಬಸ್ ಸಿಬ್ಬಂದಿ ವಿರುದ್ಧ ಸಾಕಷ್ಟು ದೂರುಗಳು ದಾಖಲಾಗಿವೆ ಕೂಡ. ಅಲ್ಲದೇ ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಕೆಲವು ನಿರ್ವಾಹಕರು ಬಸ್‌ ಒಳಗೆ ಹತ್ತಲು ಬಿಡದಿರುವ ಪ್ರಸಂಗಗಳು ನಡೆದಿವೆ. ನಗದು ನೀಡಿ ಟಿಕೆಟ್ ಪಡೆಯುವ ಪ್ರಯಾಣಿಕರಿಗೆ ಸಿಬ್ಬಂದಿ ಆದ್ಯತೆ ನೀಡುತ್ತಾರೆ.

ಮೈಸೂರು ಜಿಲ್ಲೆಯ ತಿ.ನರಸೀಪುರ, ಬನ್ನೂರು, ಮಂಡ್ಯ ಜಿಲ್ಲೆಯ ಮಳವಳ್ಳಿ, ಮದ್ದೂರು, ಹಾಸನ, ರಾಮನಗರ, ಚಾಮರಾಜನಗರ, ವಿಜಯಪುರ, ಕೊಪ್ಪಳ, ರಾಯಚೂರು, ಧಾರವಾಡ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಕೊರತೆಯಿಂದ ಸಾಕಷ್ಟು ತೊಂದರೆ ಎದುರಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ನಲ್ಲಿ ಬಸ್‌ಗಳು ಓಡಾಡುವುದು ತೀರಾ ಕಡಿಮೆ ಇದೆ ಎಂಬ ದೂರು ಕೇಳಿ ಬರುತ್ತಿದೆ.

ಚಿಕ್ಕಬಳ್ಳಾಪುರಕ್ಕೆ ಬರುವ ಒಂದಷ್ಟು ಬಸ್‌ಗಳೇ ದಿನವೂ ತುಂಬಿ ತುಳುಕುತ್ತಿರುತ್ತವೆ. ವಿದ್ಯಾರ್ಥಿಗಳು ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವಿದ್ಯಾರ್ಥಿಯೊಬ್ಬರು ತಿಳಿಸಿದರೆ, ಕನಕಪುರ ರಸ್ತೆಯಲ್ಲಿ, ದಯಾನಂದ ಸಾಗರ್ ಅಕಾಡೆಮಿ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್‌ಮೆಂಟ್ ಮತ್ತು ಜೈನ್ ವಿಶ್ವವಿದ್ಯಾಲಯದಂತಹ ಶಿಕ್ಷಣ ಸಂಸ್ಥೆಗಳ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ಲುವುದಿಲ್ಲ. ಇದರಿಂದಾಗಿ ಹೆಚ್ಚು ಸಮಯ ಕಾಯಲು ಅಥವಾ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ ಎಂದು ಮತ್ತೊಬ್ಬ ವಿದ್ಯಾರ್ಥಿ  ದೂರಿದ್ದಾರೆ.

ಇನ್ನು ಮೈಸೂರು ಜಿಲ್ಲೆಯ ಬನ್ನೂರು ಮತ್ತು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗಷ್ಟೆ ವಿದ್ಯಾರ್ಥಿಗಳು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರಸ್ತೆ ನಡೆ ನಡೆಸಿ ಪ್ರತಿಭಟಿಸಿದ್ದರು. ಈ ವೇಳೆ ಬಸ್‌ಗಳಿಲ್ಲ, ಇದರಿಂದ ಶಾಲೆ ಕಾಳೇಜಿಗೆ ಹೋಗಲು ಹಲವಾರು ವಿದ್ಯಾರ್ಥಿಗಳು ಮತ್ತು ಕಚೇರಿ ಹೋಗುವವರು ಹರಸಾಹಸ ಪಡುವಂತಾಗುತ್ತಿದೆ ಎಂದು ಅತ್ತಹಳ್ಳಿ ದೇವರಾಜ್‌ ಸಮಸ್ಯೆಯ ಬಗ್ಗೆ ತಿಳಿಸುತ್ತ ಈ ಕುರಿತು ಪೊಲೀಸರಿಗೂ ಮನವಿ ಮಾಡಲಾಗಿದೆ ಆದರೂ ಏನು ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

4 ವರ್ಷದಿಂದ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆದೇ ಇಲ್ಲ: ಕಳೆದ ನಾಲ್ಕು ವರ್ಷಗಳಲ್ಲಿ ಹೊಸದಾಗಿ ನೇಮಕಾತಿ ಆಗಲಿ, ಎಸಿ ಅಲ್ಲದ ಸಾಮಾನ್ಯ ಬಸ್‌ಗಳನ್ನು ಹೆಚ್ಚಾಗಿ ಖರೀದಿಸಿಲ್ಲ. ಸಿಬ್ಬಂದಿ ನೇಮಕಾತಿಗೆ ಸರ್ಕಾರ ಅನುಮತಿ ನೀಡಬೇಕು. ಸಾರಿಗೆ ಮುಷ್ಕರದ ನಂತರ ಅನೇಕ ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ಅವರಲ್ಲಿ ಕೆಲವರು ಕೋವಿಡ್ -19 ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ.

ಇನ್ನು ಕೆಲವರು ನಿವೃತ್ತರಾಗಿದ್ದಾರೆ ಮತ್ತಷ್ಟು ನೌಕರರು ಅಮಾನತು ಶಿಕ್ಷೆಯಲ್ಲಿದ್ದಾರೆ. ನಮಗೆ ಹೆಚ್ಚಿನ ನಾನ್-ಎಸಿ ಬಸ್‌ಗಳು ಸಹ ಬೇಕು ಎಂದು ಬಸ್‌ ಮತ್ತು ಸಿಬ್ಬಂದಿ ಕೊರತೆ ಕುರಿತುಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. [wp-rss-aggregator limit=”3″]

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ