NEWSಕೃಷಿನಮ್ಮಜಿಲ್ಲೆ

ಸಿಎಂಗೆ ರೈತರ ಸಮಸ್ಯೆ ಮನವಿ ಸಲ್ಲಿಸಲು ಅವಕಾಶ ನೀಡದಿದ್ದರೆ ಕಪ್ಪು ಬಾವುಟ ಪ್ರದರ್ಶನ : ರಾಮಾಪುರ ರಾಜೇಂದ್ರ

ವಿಜಯಪಥ ಸಮಗ್ರ ಸುದ್ದಿ

ಹನೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹನೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ರೈತರ ಸಮಸ್ಯೆ ಕುರಿತು ಅವರಿಗೆ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದಲ್ಲಿ, ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತ್ಯದ ಅಧ್ಯಕ್ಷ ರಾಮಾಪುರ ರಾಜೇಂದ್ರ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕು ಕರ್ನಾಟಕ ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹನೂರು ಪಟ್ಟಣಕ್ಕೆ‌‌ ಸಿ.ಎಂ ಆಗಮಿಸಿದಾಗ ವಿವಿಧ ಸಮಸ್ಯೆಗಳನ್ನು‌ ಹೇಳಿಕೂಳ್ಳಲು ಅವಕಾಶ ನೀಡದ್ದಿದ್ದರೆ ಮುಖ್ಯಮಂತ್ರಿಗಳ ವಿರುದ್ದ ಕಪ್ಪು ಬಾವುಟ ಪ್ರದರ್ಶನ ಮಾಡುವುದಿಲ್ಲ ಏಕೆಂದರೆ ಹನೂರು ತಾಲೂಕಿನ ಅಭಿವೃದ್ಧಿ ಬಗ್ಗೆ ಹಾಗೂ ಮೂಲಭೂತ ಸಮಸ್ಯೆಗಳ ಬಗ್ಗೆ ಗಮನಹರಿಸದ ಇಲ್ಲಿನ ಉಸ್ತುವಾರಿ ಸಚಿವರು ಹಾಗೂ ಶಾಸಕರ ವಿರುದ್ದ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದರು.

ಇನ್ನು ತಾಲೂಕಿನ ಅಭಿವೃದ್ಧಿಗೆ ಮುಂದಾಗದೇ ಹುಲಿ ಯೋಜನೆಯಂತಹ ಅನವಶ್ಯಕ ವಿಷಯಗಳನ್ನು ಜನರ ಜೀವನಕ್ಕೆ ತೊಂದರೆ ನೀಡುತ್ತಿದ್ದಾರೆ ಈಗಿರುವಾಗ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಬಂದು ಭಾಷಣ ಮಾಡಿಸೋದೊ ನಿಮಗೆ ಯೋಗ್ಯತೆ ಇದ್ದಿಯಾ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಕಮೀಷನ್ ದಂಧೆಯ ಸರ್ಕಾರಗಳು : ದೇಶಕ್ಕೆ ಆಹಾರ ಭದ್ರತೆ ಒದಗಿಸುವ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇದರಿಂದ ರೈತರಿಗೆ 20% ನಷ್ಟವಾಗುತ್ತಿದೆ. ರೈತರ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಡಿ.19 ರಂದು ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗೆ ಜಿಲ್ಲೆಯಿಂದಲೂ ರೈತರು ತೆರಳಲಿದ್ದಾರೆ ಎಂದರು.

ಮುಖಂಡರಾದ ಹರೀಶ್, ಬೋಸ್ಕೊ, ಸದಾನಂದ, ಬಸವರಾಜು, ಮಹೇಶ ಇನ್ನಿತರರು ಇದ್ದರು.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ