CrimeNEWSನಮ್ಮಜಿಲ್ಲೆಬೆಂಗಳೂರು

ಶ್ರೀರಾಮನ ಕಟೌಟ್‌ ಬಿದ್ದು ಗಾಯ ಪ್ರಕರಣ: ಶಾಸಕ ರಘು ವಿರುದ್ಧ ಕಠಿಣ ಕ್ರಮಕ್ಕೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶ್ರೀರಾಮ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮಕ್ಕಾಗಿ ಅನಧಿಕೃತ ಕಟೌಟ್ಗಳನ್ನು ಹಾಕಿದ್ದಲ್ಲದೆ ಕಾರ್ಯಕ್ರಮ ಮುಗಿದು 10 ದಿನಗಳಾದರೂ ಕಟೌಟ್‌ ತೆರವುಗೊಳಿಸದೆ ಈಗ ಮೂವರ ಪ್ರಾಣಕ್ಕೆ ಕುತ್ತು ತಂದಿರುವ ಸರ್ಸಿವಿ ರಾಮನ್ ನಗರ ಶಾಸಕ ರಘು ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದುಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಎಚ್‌ಎಎಲ್‌ ವಿಮಾನ ನಿಲ್ದಾಣದ ಪಕ್ಕದಲ್ಲಿ ಖಾಸಗಿ ಶಾಲೆಗೆ ಸೇರಿದ ಗೋಡೆಗೆ ಕಟ್ಟಲಾಗಿದ್ದ ಬೃಹತ್‌ ಕಟೌಟ್‌ ಬಿದ್ದು, ಮೂವರು ಪಾದಚಾರಿಗಳು ಗಂಭೀರ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿ ವಿಷಾದ ವ್ಯಕ್ತಪಡಿಸಿದ ಪಕ್ಷದ ಬೆಂಗಳೂರು ಸಂಘಟನಾ ಕಾರ್ಯದರ್ಶಿ ಜಗದೀಶ್‌ ಬಾಬು, ಶಾಸಕ ರಘು ಹಾಗೂ ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅವಘಡ ಸಂಭವಿಸಿದೆ ಎಂದು ಕಿಡಿಕಾರಿದರು.

ಇನ್ನು ಈ ಬಗ್ಗೆ ತಕ್ಷಣ ಬಿಬಿಎಂಪಿ ಕಮಿಷನರ್‌, ಶಾಸಕರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಅದೃಷ್ಟವಶಾತ್‌ ಭಾರೀ ಅನಾಹುತ ತಪ್ಪಿದೆ. ಗಂಭೀರ ಗಾಯಗೊಂಡಿರುವ ಪಾದಚಾರಿಗಳಿಗೆ ಸೂಕ್ತ ಚಿಕಿತ್ಸೆ ಸೌಲಭ್ಯ ಒದಗಿಸಬೇಕು ಹಾಗೂ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಅನಧಿಕೃತ, ಅವಧಿ ಮೀರಿದ ಕಟೌಟ್‌ಗಳು ತಾಂಡವವಾಡುತ್ತಿವೆ. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಪ್ರಾಣ ಕೈಯಲ್ಲಿ ಹಿಡಿದುಕೊಂಡೇ ಓಡಾಡುವ ಪರಿಸ್ಥಿತಿ ಇದೆ. ರಸ್ತೆಯುದ್ದಕ್ಕೂ ಇಂತಹ ಕಟೌಟ್‌ಗಳು, ಜೋತುಬಿದ್ದ ತಂತಿಗಳು, ಗುಂಡಿಬಿದ್ದ ರಸ್ತೆಗಳೇ ತುಂಬಿವೆ. ಸುರಕ್ಷಿತ ಬೆಂಗಳೂರು ನಿರ್ಮಾಣ ಯಾವಾಗ ಆಗಲಿದೆ ಎಂದು ಜಗದೀಶ್‌ ಬಾಬು ಬೇಸರದಿಂದ ಪ್ರಶ್ನಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ