NEWSಆರೋಗ್ಯನಮ್ಮಜಿಲ್ಲೆ

ಆರೋಗ್ಯ ಉಪ ಕೇಂದ್ರ ನಿರ್ಮಿಸಲು ಸ್ವಂತ ನಿವೇಶನ ದಾನ ನೀಡಿದ ರೈತ ಸಿದ್ದಪ್ಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹನೂರು: ಎಲ್ಲೆಮಾಳ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ನಿರ್ಮಿಸಲು ಸ್ವಂತ ಜಾಗವನ್ನು ಚಾಮರಾಜನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಬಂದು ರೈತರೊಬ್ಬರು ದಾನ ಮಾಡಿದ್ದಾರೆ.

ಹನೂರು ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದಿದ್ದರಿಂದ, ಉಪಕೇಂದ್ರ ಕಟ್ಟಡ ನಿರ್ಮಿಸಲು ಸ್ಥಳದ ದಾನಿಗಳಾದ ಜಯಮ್ಮ ಮತ್ತು ಕೆ.ವಿ.ಸಿದ್ದಪ್ಪ , ಕೆಂಚಯ್ಯನದೊಡ್ಡಿ ಅವರು ಎಲ್ಲೇಮಾಳ ಗ್ರಾಮದ ಸರ್ವೆ ನಂಬರ್ 28 / 20ರಲ್ಲಿರುವ ತಮ್ಮ ಸ್ವಂತ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಿದ್ದಾರೆ.

ಜಯಮ್ಮ ಮತ್ತು ವಿ.ಸಿದ್ದಪ್ಪ 0 -05.50 ಎಕರೆ ನಿವೇಶವನ್ನು ( 60X40 ) ನೀಡಿದ್ದು, ಅವರ ಹೆಸರನ್ನು ಆರೋಗ್ಯ ಉಪಕೇಂದ್ರಕ್ಕೆ ಇಡಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಯಮ್ಮ ಮತ್ತು ಕೆ.ವಿ.ಸಿದ್ದಪ್ಪ ಅವರ ಈ ಸಾಮಾಜಿಕ ಸೇವಾ ಕಾರ್ಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸಿಸಿದ್ದು ಅವರ ಹೆಸರಿಡಲು ಅವಕಾಶವಿರುವುದರಿಂದ, ದಾನಿಗಳ ಹೆಸರನ್ನು ಆರೋಗ್ಯ ಉಪ ಕೇಂದ್ರಕ್ಕೆ ಇಡಲು ಇಲಾಖೆ ಸಂತಸಗೊಂಡಿದೆ ಎಂದು ಹೇಳಿದ್ದಾರೆ.

ಆರೋಗ್ಯ ಉಪಕೇಂದ್ರಕ್ಕೆ ದಾನಿಗಳ ನಿವೇಶನವನ್ನು ನೋಂದಣಿ ಮಾಡಿ ಕಟ್ಟಡ ಕಾಮಗಾರಿ ಮುಗಿದ ನಂತರ ಉಪ ಕೇಂದ್ರಕ್ಕೆ ಶ್ರೀಮತಿ ಜಯಮ್ಮ ಸಿದ್ದಪ್ಪ ಅವರ ಹೆಸರಿಡಲು ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಾಲೂಕು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ