ಬೆಂಗಳೂರು: ಇಲ್ಲದ ಸೀಟಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ಕಿತ್ತಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಪೈಪೋಟಿ ನಡೆಯುತ್ತಿದೆ ಎನ್ನುವುದರ ಬಗ್ಗೆ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಅಧಿಕಾರ, ಹುದ್ದೆಗಾಗಿ ಹೋರಾಟ ಮಾಡುತ್ತಿದೆ ಎಂದು ವ್ಯಂಗ್ಯವಾಡಿದರು.
ಇನ್ನು ಸಿಎಂ ಕುರ್ಚಿಗಾಗಿ ಶಿವಕುಮಾರ್ – ಸಿದ್ದರಾಮಯ್ಯ ಹೊಡೆದಾಡುತ್ತಿದ್ದಾರೆ. ಈ ಇಬ್ಬರೂ ಇಲ್ಲದ ಸೀಟಿಗಾಗಿ ಗುದ್ದಾಡುತ್ತಿದ್ದಾರೆ. ಜನರಿಗೆ ಒಳ್ಳೆಯದನ್ನು ಮಾಡಲು ಹೋರಾಟ ಮಾಡುತ್ತಿಲ್ಲ. ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಡಿಕೆಶಿಗೂ ಗೊತ್ತಿದೆ. ಆದರೂ ಜನರನ್ನು ಮರಳು ಮಾಡಲು ಯತ್ನಿಸುತ್ತಿದ್ದಾರೆ ಎಂದರು.
ಟಿಕೆಟ್ ಹಂಚಿಕೆ ವಿಚಾರವಾಗಿ 2 ದಿನ ಜಿಲ್ಲಾ ಸಮಿತಿ ಸಭೆಯಾಗಿದೆ ಈ ಬಾರಿ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಗ್ಯಾರಂಟಿ. ಮೂರ್ನಾಲ್ಕು ತಿಂಗಳ ಬೆಳವಣಿಗೆ ಗಮನಿಸಿದರೇ ನಮ್ಮ ಪಕ್ಷಕ್ಕೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.