ನ್ಯೂಡೆಲ್ಲಿ: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಎಐಸಿಸಿ ಘೋಷಣೆ ಮಾಡುವ ಮೂಲಕ ಫೈನಲ್ ಮಾಡದೆ ಇನ್ನು ಹಗ್ಗಜಗ್ಗಾಟದಲ್ಲೇ ಕಾಲ ಕಳೆಯುತ್ತಿದ್ದಾರೆ.
ಇಂದು ಮಧ್ಯಾಹ್ನ ದೆಹಲಿಯ ಜನ್‌ಪತ್‌ನಲ್ಲಿರುವ ಸೋನಿಯಗಾಂಧಿ ನಿವಾಸದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದ್ದು, ಈ ಮೂಲಕ ರಾಜ್ಯದ 24ನೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ನಾಳೆಯೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಅದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಪ್ರಮಾಣ ವಚನ ವೇದಿಕೆಯಾಗಿ ಸಜ್ಜುಗೊಳ್ಳುತ್ತಿದೆ.
ಸೋನಿಯಾಗಾಂಧಿ ನಿವಾಸದಲ್ಲಿ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದರು.
ಇನ್ನು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಮೊದಲಿಗೆ ಸಿದ್ದರಾಮಯ್ಯ ಅವರ ಹೆಸರೆ ಸಿಎಂ ಹುದ್ದೆಗೆ ಫೈನಲ್ ಆಗಿದೆ ಎಂದು ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.
ಸಿದ್ದರಾಮಯ್ಯ ಅವರನ್ನು ಮೊದಲು ಸೋನಿಯಾಗಾಂಧಿ ನಿವಾಸಕ್ಕೆ ಕರೆಸಿಕೊಂಡು ಶುಭಾಕೋರಿದ ರಾಹುಲ್‌ಗಾಂಧಿ ಬಳಿಕ ಅಂದರೆ ಮಧ್ಯಾಹ್ನ 12.30ರ ಸುಮಾರಿಗೆ ಡಿ.ಕೆ.ಶಿವಕುಮಾರ್ ಅವರನ್ನು ಕರೆಸಿಕೊಂಡು ಅವರಿಗೂ ಶುಭಾಶಯ ಕೋರಿದರು.
ಈ ಇಬ್ಬರು ನಾಯಕರೊಂದಿಗೆ ಪ್ರತ್ಯೇಕವಾಗಿ 1ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ ರಾಹುಲ್‌ಗಾಂಧಿ ಕರ್ನಾಟಕದಲ್ಲಿ ಯಾವುದೇ ಗೊಂದಲವಿಲ್ಲದಂತೆ ನಾವು ಚುನಾವಣೆ ವೇಳೆ ಕೊಟ್ಟಿರುವ ಎಲ್ಲ ಭರವಸೆಗಳನ್ನು ಈಡೇರಿಸುವಂತ್ತ ಗಮನಕೊಡಿ ಎಂದು ಕಿವಿ ಮಾತು ಹೇಳಿರುವುದಾಗಿ ತಿಳಿದು ಬಂದಿದೆ.
ಅದಿಷ್ಟೇ ಅಲ್ಲದೆ ಪಕ್ಷ ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗುವ ಮೂಲಕ ರಾಜ್ಯದ ಜನರು ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು ಎಂದು ತಿಳಿದು ಬಂದಿದೆ.
ಈ ಎಲ್ಲದರ ನಡುವೆ ರಾಜ್ಯದಲ್ಲಿ ಸಂಪೂರ್ಣವಾಗಿ 5 ವರ್ಷ ಕಾಂಗ್ರೆಸ್ ಸರ್ಕಾರವೇ ಇರಲಿದ್ದು ಅಧಿಕಾರ ಹಂಚಿಕೆಯಾಗಿದೆ ಅದು ಮೊದಲು ಸಿದ್ದರಾಮಯ್ಯ ಅವರಿಗೆ 24 ತಿಂಗಳುಗಳು ಬಳಿಕ 36 ತಿಂಗಳುಗಳು ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಹಂಚಿಕೆಯಾಗಿದೆ ಎಂದು ಹೇಳಲಾಗುತ್ತಿದೆ.