ಸಿದ್ದೂಜಿ ನೀವು ಇಲ್ಲಿಗೆ ಬಂದುಬಿಡಿ: ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಗೆ ರೋಚಕ ತಿರುವು!
ಹೈಕಮಾಂಡ್ ನೀಡಿದ ಆಫರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಕರ್ನಾಟಕದ ರಾಜಕಾರಣದಲ್ಲೇ ಮುಂದುವರಿಯಲು ತಮಗೆ ಹೆಚ್ಚಿನ ಆಸಕ್ತಿ ಇರುವುದಾಗಿ ಅವರು ಹೈಕಮಾಂಡ್ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.

ನ್ಯೂಡೆಲ್ಲಿ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಜೋರಾಗಿ ಬೀಸುತ್ತಿದ್ದು, ಆ ಸಸ್ಪೆನ್ಸ್ ಈಗ ಅತ್ಯಂತ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈ ಸಂಬಂಧ ದೆಹಲಿಯಲ್ಲಿ ನಡೆದ ಸುಮಾರು 6 ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ, ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತು ಸಿದ್ದೂಜಿ ನೀವು ಇಲ್ಲಿಗೆ (ರಾಷ್ಟ್ರ ರಾಜಕಾರಣಕ್ಕೆ) ಬಂದುಬಿಡಿ ಎಂಬ ಬಿಗ್ ಆಫರ್ ನೀಡಲಾಗಿದೆಯಂತೆ.

ಈ ಮೂಲಕ ರಾಜ್ಯದಲ್ಲಿ ಉಂಟಾಗಿರುವ ಮುಖ್ಯಮಂತ್ರಿ ಕುರ್ಚಿ ಕಾಳಗವನ್ನು ಸೌಹಾರ್ದಯುತವಾಗಿ ಬಗೆಹರಿಸಲು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಮುಂದೆ ಹೊಸ ದಾಳವೊಂದನ್ನು ಉರುಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಹಾಗೂ ಮುಂಬರುವ ರಾಜ್ಯಸಭಾ ಚುನಾವಣೆಗಳ ಈ ಹೊತ್ತಲೇ ಸಭೆ ನಡೆದಿರುವುದರಿಂದ, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯತ್ವ (MP) ನೀಡಿ, ಕೇಂದ್ರದಲ್ಲಿ ಪಕ್ಷದ ಪ್ರಮುಖ ಜವಾಬ್ದಾರಿ ವಹಿಸುವ ಆಫರ್ ಅನ್ನು ಹೈಕಮಾಂಡ್ ನೀಡಿದೆ. ಆ ಮೂಲಕ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಡಲು ಹಾದಿ ಸುಗಮಗೊಳಿಸುವುದು ದೆಹಲಿ ನಾಯಕರ ಪ್ಲಾನ್ ಆಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ಹೈಕಮಾಂಡ್ ನೀಡಿದ ಈ ಆಫರ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣಕ್ಕೆ ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಕರ್ನಾಟಕದ ರಾಜಕಾರಣದಲ್ಲೇ ಮುಂದುವರಿಯಲು ತಮಗೆ ಹೆಚ್ಚಿನ ಆಸಕ್ತಿ ಇರುವುದಾಗಿ ಅವರು ಹೈಕಮಾಂಡ್ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.
ಅಲ್ಲದೆ ಸದ್ಯಕ್ಕೆ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದು, ಈಗಲೇ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವುದು ಸೂಕ್ತವಲ್ಲ ಎಂಬ ವಾದವನ್ನು ಅವರು ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಿರುವಾಗಲೇ ರಾಜ್ಯದಲ್ಲೇ ಮುಂದೆ ಏನಾಗುವುದೋ ಎಂಬ ಬಗ್ಗೆ ಕುತೂಹಲವು ರಾಜ್ಯದ ಹಾಗೂ ರಾಷ್ಟ್ರದ ರಾಜಕಾರಣಿಗಳಲ್ಲೂ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲೂ ಇಮ್ಮಿಗೊಳ್ಳುತ್ತಿದೆ.
ಒಟ್ಟಾರೆ, ಕರ್ನಾಟಕ ರಾಜಕಾರಣ ಅದರನ್ನು ಸಿಎಂ ಕುರ್ಚಿ ಜಟಾಪಟಿ ಬೂದಿ ಮುಚ್ಚಿದ ಕೆಂಡಂತೆಯೇ ಮುಂದುವರಿದಿರುವ ಹಾಗಿಂದಾಗೆ ಏಳುತ್ತಿರುವ ಹೊಗೆಯಿಂದ ಸ್ಪಷ್ಟವಾಗುತ್ತಿದೆ. ಇದು ಇನ್ನು ಎಲ್ಲಿಯವರೆಗೆ ಸಾಗುವುದು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ ಎಂದು ಕೆಲವರು ಗೊಂದಲದಲ್ಲೇ ಮುಳುಗಿದ್ದಾರೆ.
Related









