NEWSಕೃಷಿನಮ್ಮಜಿಲ್ಲೆಮೈಸೂರು

ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಲೆ ಬಾಳುವ ಸಾಗುವಾನಿ, ಬೀಟೆ, ನಂದಿ ಮತ್ತಿತರ ಮರಗಳನ್ನು ಕಟಾವು ಮಾಡಿ ಸಾಗಾಣಿಕೆ ಮಾಡಲು ಅರಣ್ಯ ಇಲಾಖೆಯ ಅನುಮತಿಗಾಗಿ ಅರ್ಜಿ ಸಲ್ಲಿಸಿ ತಿಂಗಳು ಕಳೆದರೂ ಅನುಮತಿ ನೀಡುತ್ತಿಲ್ಲ.

ಹೀಗಾಗಿ ಇದರಿಂದ ರೈತರ ಸಾಕಷ್ಟು ಸಮಯ ಹಾಳುಮಾಡಿ ಅಲೆದಾಡಿಸಲಾಗುತ್ತಿದೆ. ಅಲ್ಲದೆ ಈ ಅಲೆದಾಟದ ಜತೆಗೆ ರೈತರು ಹಣವನ್ನು ವ್ಯರ್ಥವಾಗಿ ಖರ್ಚು ಮಾಡುವಂತಾಗಿದೆ. ಈ ಎಲ್ಲ ಆದ ನಂತರ ಬಹಳ ಸಂಕಷ್ಟದ ಪರಿಸ್ಥಿತಿಗೆ ತಲುಪಿದ ಬಳಿಕ ಅನುಮತಿ ನೀಡಲಾಗುತ್ತಿದೆ. ಆದ್ದರಿಂದ ಸರಳೀಕರ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಮರಗಳನ್ನು ಪಹಣಿ ಪತ್ರಿಕೆಯಲ್ಲಿ ನಮೂದು ಮಾಡಿಕೊಡುವಂತೆ ಸ್ಥಳೀಯ ತಹಸೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ, ಅವರಿಂದಲೂ ಸಹ ಹಲವಾರು ತಿಂಗಳು ವಿಳಂಬವಾಗುತ್ತಿದೆ. ಇದರಿಂದ ರೈತರು ಮರಗಳನ್ನು ಕಟಾವು ಮಾಡಿ ಸಾಗಾಣೆ ಮಾಡಲು ಹಲವಾರು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಅರಣ್ಯ ಸಚಿವರು ಈಗ ಇರುವ ನಿಯಮಗಳನ್ನು ತಿದ್ದುಪಡಿ ಮಾಡಿ ರೈತರಿಗೆ ಅನುಕೂಲವಾಗುವಂತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈತರು ತಮ್ಮ ಜಮೀನುಗಳಲ್ಲಿ ಇರುವ ಮರಗಳನ್ನು ಕಟಾವು ಮಾಡಿ ತಮ್ಮ ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಲು ಹಾಗೂ ಮಾರಾಟ ಮಾಡಲು ರೈತರು ಸಂಬಂಧ ಪಟ್ಟವರಿಗೆ ಅರ್ಜಿ ಸಲ್ಲಿಸಿದ ಒಂದು ತಿಂಗಳ ಒಳಗಾಗಿ ಅನುಮತಿ ನೀಡುವ ಬಗ್ಗೆ ನಿಯಮ ಸರಳೀಕರಣ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!