CrimeNEWSನಮ್ಮಜಿಲ್ಲೆ

ಹೊನ್ನೇನಹಳ್ಳಿಯಲ್ಲಿ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ ಪಾಪಿ ಪತಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊನ್ನೇನಹಳ್ಳಿ ಗ್ರಾಮದ ಪ್ರೇಮಾ (36) ಕೊಲೆಯಾದವರು. ಈಕೆಯ ಪತಿ ಆರೋಪಿ ಕುಮಾರ್‌ನನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಕಳೆದ 18 ವರ್ಷಗಳ ಹಿಂದೆ ಪ್ರೇಮಾಳನ್ನು ಕುಮಾರ್ ವಿವಾಹವಾಗಿದ್ದ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ, ಆರೋಪಿ ಕುಮಾರ್ ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಬುಧವಾರ ಮಧ್ಯರಾತ್ರಿ ಜಗಳ ತೆಗೆದಿದ್ದು ಗುರುವಾರ ಬೆಳಗಿನ ಜಾವ ಮಕ್ಕಳ ಎದುರಲ್ಲೇ ಟವೆಲ್‌ನಿಂದ ಕುತ್ತಿಗೆ ಬಿಗಿದು ಕೊಲೆಗೈದು ಪರಾರಿಯಾಗಿದ್ದ.

ವಿಷಯ ತಿಳಿಯುತ್ತಿದ್ದಂತೆ ಪ್ರೇಮಾ ಅವರ ಸಹೋದರ ಚೆಲುವರಾಜು ಮತ್ತು ಸಂಬಂಧಿಕರು ಗ್ರಾಮಕ್ಕೆ ಓಡಿಬಂದಿದ್ದಾರೆ. ಬಳಿಕ ಚೆಲುವಾರಜು ಪೊಲೀಸರಿಗೆ ಈ ಸಂಬಂಧ ದೂರು ನಿಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್‌ಫೆಕ್ಟರ್ ಕೆ.ವಿ.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...