CrimeNEWSಬೆಂಗಳೂರು

ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಖತರ್ನಾಕ್‌ ಕಳ್ಳ-ಕಳ್ಳಿ ಇಬ್ಬರು ಅಕ್ಕ ತಮ್ಮನಾಗಿದ್ದು, ಕಿಟಕಿ ಮೂಲಕ ಮನೆ ಹಾಗೂ ಅಂಗಡಿಗಳಿಗೆ ನುಸುಳಿಕೊಂಡು ಹೋಗಿ ಗಲ್ಲಪೆಟ್ಟಿಗೆಯಲ್ಲಿ ಸಿಕ್ಕಷ್ಟು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗುತ್ತಿದ್ದರು.

ಸದ್ಯ ಕಳ್ಳ ಕಳ್ಳಿ ಅಕ್ಕ-ತಮ್ಮನನ್ನು ಬಸವೇಶ್ವರ ನಗರ ಪೊಲೀಸರು ಬೇಟೆಯಾಡಿದ್ದು, 4 ಲಕ್ಷದ 50 ಸಾವಿರ ರೂ. ನಗದು ಹಾಗೂ ಒಂದು ಇಂಡಿಗೋ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆನಂದ್ ಹಾಗೂ ಗಾಯತ್ರಿ ಎಂಬುವರೆ ಖತರ್ನಾಕ್‌ ಕಳ್ಳರಾಗಿದ್ದು, ಆರೋಪಿಗಳು ಮನೆ ಹಾಗೂ ಅಂಗಡಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಬಳಿಕ ಸಂಸಾರ ಸಮೇತ ಗೋವಾ ಟ್ರಿಪ್ ಮಾಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಇತ್ತೀಚೆಗೆ ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಡಯಾಗ್ನಾಸ್ಟಿಕ್ ಸೆಂಟರ್​ನ ಕಿಟಕಿಯ ಎಕ್ಸಾಸ್ಟಿಂಗ್ ಫ್ಯಾನ್ ಬಿಚ್ಚಿ ಖದೀಮರು ಒಳನುಗ್ಗಿದ್ದರು. ನಂತರ ಅಲ್ಲಿದ್ದ 8 ಲಕ್ಷ 20 ಸಾವಿರ ರೂ. ನಗದನ್ನು ದೋಚಿ ಪರಾರಿಯಾಗಿದ್ದರು. ಅದರಲ್ಲಿ 3 ಲಕ್ಷ ಹಣವನ್ನು ತನ್ನ ಬಳಿ ಇಟ್ಟುಕೊಂಡಿದ್ದ ಆನಂದ್, ಉಳಿದ 5 ಲಕ್ಷ ರೂ.ಗಳನ್ನು ಅಕ್ಕ ಗಾಯತ್ರಿಗೆ ಕೊಟ್ಟಿದ್ದ.

ಕಳವು ಮಾಡಿ ದೋಚಿದ ಹಣದಲ್ಲಿ ಫ್ಯಾಮಿಲಿಯನ್ನು ಗೋವಾ ಟ್ರಿಪ್​ಗೆ ಕರೆದುಕೊಂಡು ಹೋಗಿದ್ದರು. ಪೊಲೀಸರ ತನಿಖೆ ವೇಳೆ ಆನಂದ್ ತನ್ನ ಅಕ್ಕನಿಗೆ ಹಣ ಕೊಟ್ಟಿರುವುದಾಗಿ ಹೇಳಿದ್ದ.ಕೊನೆಗೆ ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರೋದು ಬೆಳಕಿಗೆ ಬಂದಿದೆ.

ಸದ್ಯ ಬಂಧಿತರಿಂದ 4 ಲಕ್ಷದ 50 ಸಾವಿರ ರೂ. ನಗದು ಹಾಗೂ ಒಂದು ಇಂಡಿಗೋ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, 15ಕ್ಕೂ ಹೆಚ್ಚು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆಗೆ ಆರೋಪಗಳನ್ನು ಒಳಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ