CrimeNEWSನಮ್ಮಜಿಲ್ಲೆ

ಒಬ್ಬನನ್ನೇ ಮದುಯಾಗಿದ್ದ ಅಕ್ಕ-ತಂಗಿಯರು: ಪತಿ ಜತೆ ಗಲಾಟೆ ಬೆಂಕಿಹಚ್ಚಿಕೊಂಡು ತಂಗಿ ಮೃತ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ಬೇಸತ್ತ ದಂಪತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಅವರಲ್ಲಿ 2ನೇ ಹೆಂಡತಿ ಮೃತಪಟ್ಟಿದ್ದು ಪತಿ ಗಂಭೀರವಾಗಿ ಗಾಯಗೊಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ನಗರಗೆರೆ ಗ್ರಾಮದ ನಿವಾಸಿ ಶಾರದ (40) ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತಿ ಶಂಕರಯ್ಯನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಕ-ತಂಗಿಯರಾದ ಶಾರದಾ ಮತ್ತು ಗಿರಿಜಾಮ್ಮ ಇಬ್ಬರನ್ನು ಶಂಕರಯ್ಯನೇ ಮದುವೆಯಾಗಿದ್ದಾನೆ. ಈತ ಗ್ರಾಮದಲ್ಲಿ ಹೋಟೆಲ್ ಜೊತೆಗೆ ದೇವಸ್ಥಾನದಲ್ಲಿ ಪೂಜಾರಿಯಾಗಿ ಕೆಲಸ ಮಾಡುತ್ತಿದ್ದಾನೆ.

ಆದರೆ, ಕ್ಷುಲ್ಲಕ ಕಾರಣಕ್ಕೆ ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ 2ನೇ ಪತ್ನಿ ಮೇಲೆ ಪೆಟ್ರೋಲ್ ಸುರಿದಿದ್ದು, ಆಗ ಜಗಳ ವಿಕೋಪಕ್ಕೆ ತಿರುಗಿದ್ದರಿಂದ 2ನೇ ಪತ್ನಿ ತಾನೆ ಬೆಂಕಿಕಡ್ಡಿ ಗೀಚಿದ್ದು ಕ್ಷಣಾರ್ಧದಲ್ಲೇ ಬೆಂಕಿ ಇಬ್ಬರಿಗೆ ಆವರಿಸಿಕೊಂಡಿದೆ. ಇದರಿಂದ ಪತ್ನಿ ಸ್ಥಳದಲ್ಲೇ ಮೃತಪಟ್ಟರೇ, ಪತಿ ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸದ್ಯ ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಇಬ್ಬರು ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಮೊದಲ ಪತ್ನಿ ತಪ್ಪಿಸಿಕೊಂಡು ಹೊರಗೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾಳೆ. ಘಟನೆ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು