CrimeNEWSನಮ್ಮಜಿಲ್ಲೆ

ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಎಸ್‌ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ, ಅತ್ಯಾಚಾರ ವಿಚಾರಣೆ ನಡೆಸುವುದಕ್ಕಾಗಿ ಎರಡೆರಡು ಬಾರಿ ಕಸ್ಟಡಿಗೆ ಪಡೆದ್ದರು. ಆದರೆ ಈವರೆಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈಡುವೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದರೂ ಇನ್ನೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು.

ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಮತ್ತೆ ಕಸ್ಟಡಿಗೆ ಪಡೆದುಕೊಳ್ಳಲು ಕೋರ್ಟ್‌ಗೆ ಎಸ್‌ಐಟಿ ಮನವಿ ಮಾಡಲಿದೆ. ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣನನ್ನು ಕಸ್ಟಡಿಗೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.

ಇನ್ನು ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಯುತ್ತಿದೆ. ಪ್ರತಿಯೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುವುದು. ಈಗ ಇನ್ನೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ