Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿಸೆಂಬರ್‌ 10ರ ಮಂಗಳವಾರ ನಸುಕಿನಲ್ಲಿ ನಿಧನರಾದ ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.​ಎಂ. ಕೃಷ್ಣ ಅವರ ಪತ್ನಿ ಪ್ರೇಮ ಕೃಷ್ಣ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಂತ್ವನ ಹೇಳಿದ್ದು, ಶೋಕ ಸಂದೇಶವನ್ನು ಕಳುಹಿಸಿದ್ದಾರೆ.

ಪ್ರಧಾನಿ ಮೋದಿ ಅವರ ಶೋಕ ಸಂದೇಶ?: ಶ್ರೀಮತಿ ಪ್ರೇಮ ಕೃಷ್ಣ ಜೀ, ಎಸ್​.ಎಂ. ಕೃಷ್ಣ ನಿಧನದ ಸುದ್ದಿ ಕೇಳಿ ತುಂಬ ದುಃಖಿತನಾದೆ. ಅವರ ಅಗಲುವಿಕೆಯ ನಷ್ಟವು ನಿರ್ವಾತವನ್ನು ಸೃಷ್ಟಿಸಿದೆ. ಒಬ್ಬ ದೂರದೃಷ್ಟಿಯುಳ್ಳ ಮತ್ತು ಅಸಾಧಾರಣ ನಾಯಕರಾಗಿದ್ದ ಕೃಷ್ಣ ಅವರನ್ನು ರಾಜಕೀಯ ವಲಯದಾದ್ಯಂತ ಎಲ್ಲರೂ ಗೌರವಿಸಿದರು ಮತ್ತು ಮೆಚ್ಚಿದ್ದರು.

ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ರಾಜ್ಯದ ಜನತೆ ಸದಾ ಸ್ಮರಿಸುತ್ತಾರೆ. ಅವರು ಹಲವಾರು ಕ್ಷೇತ್ರಗಳ ಜನರ ಕಲ್ಯಾಣಕ್ಕಾಗಿ ಶ್ರಮಿಸಿದರು. ಪ್ರಮುಖವಾಗಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿಸ್ತರಣೆಗೆ ಅವರ ಕೊಡುಗೆಯು ಬೆಂಗಳೂರನ್ನು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಪರಿವರ್ತಿಸಲು ಸಹಾಯ ಮಾಡಿತು ಎಂದು ಪ್ರಧಾನಿ ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎಸ್​.ಎಂ. ಕೃಷ್ಣ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರೆ ಜತೆ ಜತೆಗೇ ಇತರ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದರು ಎಂಬುದು ಅವರ ಅಸಾಧಾರಣ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅವರೊಬ್ಬ ಅಸಾಮಾನ್ಯ ಓದುಗ ಮತ್ತು ಆಳವಾದ ಚಿಂತಕರಾಗಿದ್ದರು. ಕೃಷ್ಣ ಅವರೊಂದಿಗೆ ಹಲವಾರು ಬಾರಿ ಸಮಾಲೋಚನೆ ನಡೆಸಿದ್ದೇನೆ. ಆ ನೆನಪು ಸದಾ ಅಮರ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಕೃಷ್ಣ ಅವರು ಹುಟ್ಟುಹಾಕಿದ ಮೌಲ್ಯಗಳು ಕುಟುಂಬಕ್ಕೆ ಸ್ಫೂರ್ತಿ ನೀಡಲಿ. ಅವರೊಂದಿಗೆ ಕಳೆದ ಸಮಯದ ನೆನಪುಗಳು ಈ ಕಷ್ಟದ ಸಮಯದಲ್ಲಿ ನಿಮಗೆ ಸಾಂತ್ವನ ಮತ್ತು ಧೈರ್ಯ ನೀಡಲಿವೆ. ಅವರು ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳನ್ನು ಅಗಲಿದ್ದಾರೆ.ಆದರೆ ಯಾವಾಗಲೂ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ.

ಅವರ ನಿಧನಕ್ಕೆ ಹೃತ್ಪೂರ್ವಕ ಸಂತಾಪಗಳು ಮತ್ತು ಕುಟುಂಬದ ಜತೆ ನಾವಿದ್ದೇವೆ. ಅವರ ಅಸಂಖ್ಯಾತ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ. ಓಂ ಶಾಂತಿ ಎಂದು ಎಸ್​.ಎಂ. ಕೃಷ್ಣ ಅವರ ಪತ್ನಿಗೆ ಕಳುಹಿಸಿದ ಶೋಕ ಸಂದೇಶದಲ್ಲಿ ಮೋದಿ ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಕ ಸಂದೇಶ: ಎಸ್​.ಎಂ. ಕಷ್ಣ ಅವರು ಅನುಭವಿ ಸಂಸದೀಯ ಪಟು ಮತ್ತು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಶ್ರೇಷ್ಠ ನಾಯಕರಾಗಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಆರ್ಥಿಕತೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡರು.

ಅವರ ನಿಧನದೊಂದಿಗೆ ದೇಶವು ಸಮರ್ಥ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ನಿಮಗೆ ಭಗವಂತ ಕರುಣಿಸಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ KKRTC ರಾಯಚೂರು: ಲಿಂಗಸುಗೂರು ಘಟಕ ವ್ಯವಸ್ಥಾಪಕ, ಡಿಸಿ ಅಮಾನತಿಗೆ ಕರವೇ ಆಗ್ರಹ ಮೈಸೂರು: ಸಾಲದ ಸುಳಿಗೆ ಸಿಲುಕಿದ KSRTC ಕಂಡಕ್ಟ‌ರ್: ನಾಲೆಗೆ ಹಾರಿ ಆತ್ಮಹತ್ಯೆ ಎಸ್‌.ಎಂ.ಕೃಷ್ಣ ಇನ್ನಿಲ್ಲ- ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುಶೋಕ ಸಂದೇಶ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ, ಮಾಜಿ ಸಿಎಂಗಳು ಸೇರಿ ಅನೇಕ ಗಣ್ಯರ ಸಂತಾಪ ಮಾಜಿ ಸಿಎಂ SMK ನಿಧನ: ನಾಳೆ ಶಾಲಾ- ಕಾಲೇಜು, ಕಚೇರಿಗಳಿಗೆ ರಜೆ ಘೋಷಣೆ ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ: ಆಹಾರ ಸಚಿವ ಮುನಿಯಪ್ಪ KSRTC ನಿವೃತ್ತ ನೌಕರರಿಗೆ ಫ್ರೀ ಪಾಸ್‌ ಕೊಡಿ: ಹಣ ಕಟ್ಟಿದ ಮೇಲೆ ಪಾಸ್‌ ನೀಡುವುದು ಸಲ್ಲ BMTC- ಅನ್ಯ ಭಾಷೆ ಆಧಾರ್‌ಕಾರ್ಡ್‌ ವಿಳಾಸ ಕರ್ನಾಟಕದಾಗಿದ್ದಲ್ಲಿ ಮಾನ್ಯ ಮಾಡಿ: ಸಿಟಿಎಂ ಆದೇಶ