NEWSನಮ್ಮರಾಜ್ಯರಾಜಕೀಯ

ಆಮ್‌ ಆದ್ಮಿ ಪಾರ್ಟಿಗೆ ಸಮಾಜ ಸೇವಕ, ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿ ಸೇರ್ಪಡೆ

ಆಮ್‌ ಆದ್ಮಿ ಪಾರ್ಟಿಗೆ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿ ಸೇರ್ಪಡೆ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಯುವನಾಯಕ, ಸಮಾಜಸೇವಕ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿಯವರು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ, ಪಕ್ಷದ ಸಂವಹನ ವಿಭಾಗದ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ ರವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಕ್ಷದ ರಾಜ್ಯ ಕಚೇರಿಯಲ್ಲಿ ಬಸವರಾಜ್‌ ವಿ. ಜೆಂಶೆಟ್ಟಿಯವರನ್ನು ಪಕ್ಷದ ಶಾಲು ಹೊದಿಸುವ ಮೂಲಕ ಬರಮಾಡಿಕೊಂಡು ಮಾತನಾಡಿದ ಮೋಹನ್‌ ದಾಸರಿ, ಬಸವರಾಜ್‌ ಅವರು ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಕಾರ್ಯದರ್ಶಿ ಹಾಗೂ ಅಧ್ಯಕ್ಷ ಹುದ್ದೆಗಳಿಗೆ ಆಯ್ಕೆಯಾಗಿ, ವಿದ್ಯಾರ್ಥಿಗಳ ಹಿತಕ್ಕಾಗಿ ಶ್ರಮಿಸಿದ ಅನುಭವ ಹೊಂದಿದ್ದಾರೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ಯುವ ಘಟಕಗಳಲ್ಲಿ ಕೂಡ ಸಕ್ರಿಯವಾಗಿ ತೊಡಗಿಕೊಂಡಿದ್ದರು.

ಆಮ್‌ ಆದ್ಮಿ ಪಾರ್ಟಿಗೆ ರಿಯಲ್‌ ಎಸ್ಟೇಟ್‌ ಉದ್ಯಮಿ ಬಸವರಾಜ್‌ ವಿ. ಜೆಂಶೆಟ್ಟಿ ಸೇರ್ಪಡೆ.

ಟ್ರಸ್ಟ್‌ವೊಂದರ ಸಂಸ್ಥಾಪಕ ಸದಸ್ಯ ಹಾಗೂ ಆಜೀವ ಸದಸ್ಯರಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. ಉತ್ತಮ ಪ್ರಜಾಕೀಯ ಪಾರ್ಟಿಯ ಸಂಸ್ಥಾಪಕ ಸದಸ್ಯರಾಗಿರುವ ಬಸವರಾಜ್‌, 2018ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಉತ್ತಮ ನಾಯಕತ್ವ ಗುಣ ಹೊಂದಿರುವ ಹಾಗೂ ಸಮಾಜದ ಮೇಲೆ ಅಪಾರ ಕಾಳಜಿ ಹೊಂದಿರುವ ಇಂತಹವರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಸೇರಿ ಮಾತನಾಡಿದ ಬಸವರಾಜ್‌ ವಿ. ಜೆಂಶೆಟ್ಟಿ, ಕಳೆದ ಹತ್ತು ವರ್ಷಗಳ ಸಣ್ಣ ಅವಧಿಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಎರಡು ರಾಜ್ಯಗಳಲ್ಲಿ ಅಧಿಕಾರ ಪಡೆದು ಮಾಡಿರುವ ಸಾಧನೆಗಳು ಹಾಗೂ ದೇಶದ ರಾಜಕೀಯದಲ್ಲಿ ತಂದಿರುವ ಬದಲಾವಣೆಗಳು ಅಭೂತಪೂರ್ವವಾಗಿವೆ. ಸರ್ಕಾರಿ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳ ಬಗ್ಗೆ ಇಂದು ಬಿಜೆಪಿ, ಕಾಂಗ್ರೆಸ್‌ನಂತಹ ಹಳೆಯ ಪಕ್ಷಗಳು ಮಾತನಾಡುತ್ತಿದ್ದು, ಇದರ ಶ್ರೇಯಸ್ಸು ಆಮ್‌ ಆದ್ಮಿ ಪಾರ್ಟಿಗೆ ಸಲ್ಲಬೇಕು ಎಂದರು.

ಇನ್ನು ದೆಹಲಿಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದ ಮನೀಷ್‌ ಸಿಸೋಡಿಯಾ ಹಾಗೂ ಆರೋಗ್ಯ ಕ್ಷೇತ್ರವನ್ನು ಸುಧಾರಿಸಿದ ಸತ್ಯೇಂದ್ರ ಜೈನ್‌ ಇಂದು ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಿಂದ ಸುಳ್ಳು ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಬಿಜೆಪಿಗೆ ಆಮ್‌ ಆದ್ಮಿ ಪಾರ್ಟಿಯ ಭಯ ಯಾವ ಪ್ರಮಾಣದಲ್ಲಿ ಕಾಡುತ್ತಿದೆ ಎಂಬುದನ್ನು ಇದರಿಂದ ತಿಳಿಯಬಹುದು. ಕರ್ನಾಟಕದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಜನಪರ ಆಡಳಿತ ರಚನೆಯಾಗಬೇಕೆಂದರೆ ಇಲ್ಲಿ ಕೂಡ ಆಮ್‌ ಆದ್ಮಿ ಪಾರ್ಟಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಸೇರ್ಪಡೆ ಸಮಾರಂಭದಲ್ಲಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷ ಕುಶಲ ಸ್ವಾಮಿ, ಪಕ್ಷದ ಮುಖಂಡ ರಾಜೇಂದ್ರ ಕುಮಾರ್ ಸೇರಿದಂತೆ ಅನೇಕ ಬೆಂಬಲಿಗರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?