CrimeNEWSರಾಜಕೀಯ

ರಸ್ತೆಗುಂಡಿಗೆ ಯೋಧ ಬಲಿ: ಪ್ರತಿಭಟಿಸಿದ ಎಎಪಿ ಮುಖಂಡರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಾಜಿನಗರದ ಡಾ. ರಾಜ್‌ಕುಮಾರ್‌ ರಸ್ತೆಯ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಾಜಿ ಯೋಧ ಕುಮಾರ್‌ ಮೃತಪಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ ಬೆಂಗಳೂರು ವಕ್ತಾರರಾದ ಉಷಾ ಮೋಹನ್‌, “ಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದಾಗಿ ಅಪಘಾತವಾಗುವುದು ಸಾಮಾನ್ಯವಾಗಿಬಿಟ್ಟಿದೆ. ತಿಂಗಳಿಗೆ ಕನಿಷ್ಠ ಮೂರ್ನಾಲ್ಕು ಮಂದಿಯಾದರೂ ಜೀವ ಕಳೆದುಕೊಳ್ಳುತ್ತಿದ್ದಾರೆ. ಆದರೂ ಸರ್ಕಾರ ಕಿವಿ ಕಣ್ಣು ಮುಚ್ಚಿಕೊಂಡಿದೆ ಎಂದು ಕಿಡಿಕಾರಿದರು.

ಇನ್ನು ಅಪಘಾತ ನಡೆದು ಯೋಧ ಕುಮಾರ್‌ ಜೀವ ಕಳೆದುಕೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಆಗಮಿಸಬೇಕು. ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಬೇಕು. ರಸ್ತೆ ಗುಂಡಿಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ಸುಮನ್‌ ಪ್ರಶಾಂತ್‌ ಮಾತನಾಡಿ, ““ಜೀರೋ ಟ್ರಾಫಿಕ್‌ನಲ್ಲಿ ತಿರುಗಾಡುವ ಮುಖ್ಯಮಂತ್ರಿಯವರಿಗೆ ಹಾಗೂ ಸದಾ ಕಾರಿನಲ್ಲೇ ತಿರುಗಾಡುವ ಸಚಿವರು ಹಾಗೂ ಶಾಸಕರಿಗೆ ಬೈಕ್‌ ಸವಾರರ ಕಷ್ಟ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತ ಕೇಳಿದಷ್ಟು ಕಮಿಷನ್‌ ಕೊಡಲು ಗುತ್ತಿಗೆದಾರರು ಒಪ್ಪದ ಕಾರಣಕ್ಕೆ ರಸ್ತೆ ಕಾಮಗಾರಿಗೆ ಹಣ ಬಿಡುಗಡೆ ಮಾಡಲೂ ಸರ್ಕಾರ ಮೀನಮೇಷ ಎಣಿಸುತ್ತಿದೆ. ಸಚಿವರು ಹಾಗೂ ಶಾಸಕರ ಹಣ ದಾಹದಿಂದ ಅಮೂಲ್ಯ ವ್ಯಕ್ತಿಗಳನ್ನು ದೇಶ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಎಎಪಿ ಮುಖಂಡರಾದ ಉಷಾ ಮೋಹನ್‌, ಸುಮನ್‌ ಪ್ರಶಾಂತ್‌, ಪುಟ್ಟಣ್ಣ ಗೌಡ, ವಿಶ್ವನಾಥ್‌, ಮಹೇಶ್‌ ಬಾಬು ಮತ್ತಿತರ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ