Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಮೊಳಗಿತು ಸಾರಿಗೆ ನೌಕರರ ಹೋರಾಟದ ಕಹಳೆ – ಅಧಿಕಾರಿಗಳಲ್ಲಿ ತಲ್ಲಣ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೆಚ್ಚೆದೆಯ ಹೋರಾಟದ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ನಮ್ಮ ಸಾರಿಗೆ ನೌಕರರು ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲೂ ಕಲಬುರಗಿಯಲ್ಲಿ ಇಂದು ನಡೆದ ಸಾರಿಗೆ ನೌಕರರ ಮಹಾ ಸಮಾವೇಶದ ಬಗ್ಗೆ ಸಮಸ್ತರು ಸಂತಸ ಹಂಚಿಕೊಳ್ಳುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದೇ ಅಕ್ಟೋಬರ್‌ 10ರಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಲ್ಲಿ ಜಾಲನೆಗೊಂಡು ಸಾರಿಗೆ ನೌಕರರ ಕೂಟದ ನೇತೃತ್ವದಲ್ಲಿ ರಾಜ್ಯಾದ್ಯಂತ ಸಚರಿಸುತ್ತಿರುವ ಬೃಹತ್‌ ಸೈಕಲ್‌ ಜಾಥಾವು ಇಂದು ಕಲಬುರಗಿ ನಗರದಲ್ಲಿ ಮಹಾ ಸಮಾವೇಶ ಏರ್ಪಡಿಸಿತ್ತು.

ಸಮಾವೇಶಕ್ಕೂ ಮುನ್ನಾ ಜಿಲ್ಲಾಧಿಕಾರಿಗಳಿಗೆ ನೌಕರರ ಸಮಸ್ಯೆಗೆ ಮುಕ್ತಿ ನೀಡುವಂತೆ ಮನವಿ ಸಲ್ಲಿಸಲಾಯಿತು. ಈ ವೇಳೆ  ಸುಮಾರು 3 ಸಾವಿರ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸುವ ಮೂಲಕ ಸೈಕಲ್‌ ಜಾಥಾಕ್ಕೆ ಸಾಥ್‌ ನೀಡಿದರು.

ಬಳಿಕ ಸಮಾವೇಶಕ್ಕೂ ತೆರಳಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಈ ಮೂಲಕ ನಾವು ಸಾರಿಗೆ ನೌಕರರು ಕೆಲವರನ್ನು ಹೊರತುಪಡಿಸಿದರೆ ಒಗ್ಗಟ್ಟಾಗೇ ಇದ್ದೇವೆ ಎಂಬ ಸಂದೇಶವನ್ನು ಸರ್ಕಾರ ಮತ್ತು ಆಡಳಿತ ಮಂಡಳಿಗೂ ತಲುಪಿಸಿದರು.

ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿಯೇ ನೂರಾರು ಕಿಲೋ ಮೀಟರ್‌ ಕ್ರಮಿಸಿ ನೂರಾರು ನೌಕರರು ಕಲಬುರಗಿ ತಲುಪಿದರು. ಅವರನ್ನು ಸಮಾವೇಶದ ಸ್ಥಳಕ್ಕೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು ಕೂಟದ ಪದಾಧಿಕಾರಿಗಳು ಮಾಡಿದ್ದರು. ಅಲ್ಲದೆ ತಿಂಡಿ ಊಟದ ವ್ಯವಸ್ಥೆಯನ್ನು ಮಾಡಿದ್ದರು.

ಕಲಬುರಗಿ ಸಾರಂಗಮಠ ಶ್ರೀಶೈಲಂ, ಸುಲಫಲ ಮಠ ಶ್ರೀ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಅವರು ಸಮಾವೇಶ ಸಾನಿಧ್ಯ ವಹಿಸಿದ್ದರು. ಇವರ ಜತೆಗೆ ಅನೇಕ ಗಣ್ಯರು ಭಾಗವಹಿಸುವ ಮೂಲಕ ನೌಕರರ ನ್ಯಾಯಯುತ ಹೋರಾಟಕ್ಕೆ ಸಾಥ್‌ ನೀಡಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...