NEWSಕೃಷಿದೇಶ-ವಿದೇಶ

ರೈತರ ಸಮಸ್ಯೆ ಪರಿಹರಿಸಿ: ಕೇಂದ್ರ ಸಚಿವರ ಭೇಟಿ ಮಾಡಿದ ಕುರುಬೂರು ಶಾಂತಕುಮಾರ್ ನೇತೃತ್ವದ ನೀಯೋಗ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ರಾಜ್ಯದ ರೈತರ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತಕೂಬ ಅವರನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ ಮುಖಂಡರ ನೀಯೋಗ ಭೇಟಿ ಹಲವಾರು ಸಮಸ್ಯೆಗಳನ್ನು ಮಂಡಿಸಿ ಗಮನ ಸೆಳೆಯಿತು.

ಕೃಷಿ ಉತ್ಪನ್ನಗಳ ಮೇಲೆ ರಸಗೊಬ್ಬರ, ಕೀಟನಾಶಕ ಹನಿ, ನೀರಾವರಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು. ಪ್ರಸಕ್ತ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಉತ್ಪಾದನಾ ಸಾಲ ಬಡ್ಡಿ ರಹಿತವಾಗಿರಬೇಕು. ಕೃಷಿ ಭೂಮಿ ಮೌಲ್ಯದ ಶೇಕಡ 75ರಷ್ಟು ಸಾಲ ನೀಡುವಂತೆ ನೀತಿ ರೂಪಿಸಿ. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಮಾನದಂಡ ಕೈಬಿಡಬೇಕು.

ಕಬ್ಬಿನ ಎಫ್‌ಆರ್‌ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಆಕಸ್ಮಿಕ ಬೆಂಕಿಗೆ ಸುಟ್ಟು ಹೋದ ಕಬ್ಬಿನಿಂದ ಸಕ್ಕರೆ ಕಾರ್ಖಾನೆಗಳು 25% ರಷ್ಟು ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು. ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಕನಿಷ್ಠ 9:5ಕ್ಕೆ ಇಳಿಸಬೇಕು. ಕಬ್ಬು ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಕಾರಣ ಎಫ್‌ಆರ್‌ಪಿ ದರವನ್ನು 2023-24ನೆ ಸಾಲಿಗೆ ಕನಿಷ್ಠ ಟನ್‌ಗೆ ₹3500 ನಿಗದಿ ಮಾಡಬೇಕು.

ಕಬ್ಬಿನಿಂದ ಉತ್ಪಾದಿಸುವ ಎತನಾಲ್ ನೀತಿ ಬದಲಾಯಿಸಿ ಮುಕ್ತ ಅವಕಾಶ ಕಲ್ಪಿಸಬೇಕು. ರೈತರ ಬೆಲ್ಲದ ಗಾಣದಲ್ಲಿ ಉತ್ಪಾದನೆಗೆ ಅವಕಾಶ ಕಲ್ಪಿಸಬೇಕು. ಎಲ್ಲ ಕೃಷಿ ಉತ್ಪನ್ನ ಬೆಳೆಗಳಿಗೂ ಪಸಲ್ ಬಿಮಾ ಬೆಳೆ ವಿಮೆ ಯೋಜನೆ ಜಾರಿ ತರಭೇಕು ಈ ಯೋಜನೆ ಕೆಲವು ತಿದ್ದುಪಡಿಗಳು ಆಗಬೇಕು. ಅತಿವೃಷ್ಟಿ-ಅನಾವೃಷ್ಟಿ ಆಕಸ್ಮಿಕ ಬೆಂಕಿ ಪ್ರವಾಹ ಹಾನಿ ಬೆಳೆ ನಾಶ ಪರಿಹಾರ ಮಾನದಂಡ ವೈಜ್ಞಾನಿಕವಾಗಿ ಬದಲಾಗಬೇಕು.

ವನ್ಯಮೃಗಗಳ ಸಂರಕ್ಷಣೆ, ಮಾನವ ರಕ್ಷಣಾ ಕಾಯ್ದೆ ಕಾಡು ಪ್ರಾಣಿಗಳ ಹಾವಳಿ ತಡೆ ಕಾನೂನು1972 ಕ್ಕೆ ತಿದ್ದುಪಡಿ ತರಬೇಕು. ಕಾಡು ಪ್ರಾಣಿಗಳ ದಾಳಿಗೆ ತುತ್ತಾದ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತ 50 ಲಕ್ಷ ರೂ.ಗಳಿಗೆ ಏರಿಸಬೇಕು. ಕೇಂದ್ರ ಸರ್ಕಾರವೇ ಆರಂಭಿಸಿರುವ. ಕೊರೊನಾ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ಎಲ್ಲ ರೈತ ಉತ್ಪಾದಕ ಸಂಸ್ಥೆಗಳಿಗೆ ಸಾಲದ ಮೇಲಿನ ಬಡ್ಡಿ ಮನ್ನಾಮಾಡಿ ಹೊಸ ಸಾಲ ಎಂದು ಪರಿಗಣಿಸಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಸಲು ಪುನಶ್ಚೇತನ ಸಾಲ ನೀಡಿ ಪ್ರೋತ್ಸಾಹಿಸಬೇಕು ಎಂಬ ಒತ್ತಾಯದ ಪತ್ರ ನೀಡಿದರು.

ಕೃಷಿ ಸಾಲನೀತಿ, ಸಿಬಿಲ್ ಸ್ಕೋರ್ ಬಗ್ಗೆ, ಹಣಕಾಸು ಸಚಿವರ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಸಚಿವ ಜೋಶಿ ಅವರು ತಿಳಿಸಿದರು. ರೈತರ ನಿಯೋಗದಲ್ಲಿ ಪರಶುರಾಮ್ ಎತ್ತಿನಗುಡ್ಡ, ನಂಜುಂಡಸ್ವಾಮಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು