
ಬೆಂಗಳೂರು: ಮದ್ಯವೆಸನಿ ಮಗ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ತನ್ನ ತಾಯಿಯನ್ನು ರಾಎನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ.
ಮುನೇಶ್ವರ ನಗರದ ನಿವಾಸಿ ಶಾಂತಾಬಾಯಿ (82) ಕೊಲೆಯಾದವರು. ಮಹೇಂದ್ರ ಸಿಂಗ್ (52) ಕೊಲೆ ಮಾಡಿದ ಆರೋಪಿ. ಗುರುವಾರ (ಏ.10) ಹಣಕ್ಕಾಗಿ ತಾಯಿ ಮತ್ತು ಮಗನ ನಡುವೆ ಜಗಳ ನಡೆದಿದೆ. ವೇಳೆ ಜಗಳ ತಾರಕ್ಕೇರಿ ಆತ ಆಕೆಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾನೆ ಈ ವೇಳೆ ತಾಯಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮಹೇಂದ್ರ ಸಿಂಗ್ ಮದ್ಯದ ಚಟಕ್ಕೆ ದಾಸನಾಗಿದ್ದು, ಕೆಲಸಕ್ಕೆ ಹೋಗದೆ ಬೀದಿನಾಯಿಯಂತೆ ಅಲೆದಾಡಿಕೊಂಡು ಮನೆಗೆ ಬರುತ್ತಿದ್ದ. ಈ ವೇಳೆ ಹಣಕ್ಕಾಗಿ ಪ್ರತಿದಿನ ತಾಯಿಯನ್ನು ಹಿಂಸಿಸಿ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.
ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹತ್ಯೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.