CRIMENEWSನಮ್ಮಜಿಲ್ಲೆ

ಕುಡಿಯಲು ಹಣ ಕೊಡದ 80 ವರ್ಷದ ತಾಯಿಯ ರಾಡ್‌ನಿಂದ ಹೊಡೆದು ಕೊಂದ ಮಗ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯವೆಸನಿ ಮಗ ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ತನ್ನ ತಾಯಿಯನ್ನು ರಾಎನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ.

ಮುನೇಶ್ವರ ನಗರದ ನಿವಾಸಿ ಶಾಂತಾಬಾಯಿ (82) ಕೊಲೆಯಾದವರು. ಮಹೇಂದ್ರ ಸಿಂಗ್ (52) ಕೊಲೆ ಮಾಡಿದ ಆರೋಪಿ. ಗುರುವಾರ (ಏ.10) ಹಣಕ್ಕಾಗಿ ತಾಯಿ ಮತ್ತು ಮಗನ ನಡುವೆ ಜಗಳ ನಡೆದಿದೆ. ವೇಳೆ ಜಗಳ ತಾರಕ್ಕೇರಿ ಆತ ಆಕೆಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾನೆ ಈ ವೇಳೆ ತಾಯಿ ಗಾಯಗೊಂಡು ಮೃತಪಟ್ಟಿದ್ದಾರೆ.

ಮಹೇಂದ್ರ ಸಿಂಗ್ ಮದ್ಯದ ಚಟಕ್ಕೆ ದಾಸನಾಗಿದ್ದು, ಕೆಲಸಕ್ಕೆ ಹೋಗದೆ ಬೀದಿನಾಯಿಯಂತೆ ಅಲೆದಾಡಿಕೊಂಡು ಮನೆಗೆ ಬರುತ್ತಿದ್ದ. ಈ ವೇಳೆ ಹಣಕ್ಕಾಗಿ ಪ್ರತಿದಿನ ತಾಯಿಯನ್ನು ಹಿಂಸಿಸಿ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದು ಬಂದಿದೆ.

ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹತ್ಯೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Deva
the authorDeva

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ