NEWSನಮ್ಮಜಿಲ್ಲೆಶಿಕ್ಷಣ-

ಆಟೋ ಚಾಲಕರ ಪುತ್ರ ದ್ವಿತೀಯ ಪಿಯು ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಆಟೋ ಚಾಲಕರ ಪುತ್ರ ಚಿರಂಜೀವಿ ಟಿ.ಆರ್‌. 600ಕ್ಕೆ 529 ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಚಿರಂಜೀವಿ ಟಿ.ಆರ್‌. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಬಾಗೂರು ಹೋಬಳಿಯ ತಿಮ್ಮಲಾಪುರ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಆಟೋ ಚಾಲಕರಾಗಿರುವ ರಂಗಸ್ವಾಮಿ ಮತ್ತು ಸುಜಾತ ದಂಪತಿಯ ಪುತ್ರ.

ಚಿರಂಜೀವಿ ಬೆಂಗಳೂರಿನ ಪೀಣ್ಯ 2ನೇ ಹಂತದ ಗುಡ್‌ವೀಲ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 529 ಅಂಕ ಪಡೆಯುವ ಮೂಲಕ  ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯೊಂದಿದ್ದಾರೆ.

ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಬಿಜೆಪಿಗೆ ಜೈ ಎಂದ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ : ಎಚ್‌ಡಿಕೆ ಪ್ರಜ್ವಲ್ ರೇವಣ್ಣನ ಪಕ್ಷದಿಂದ ಅಮಾನತು ಮಾಡಿ: ಎಚ್‌ಡಿಡಿಗೆ ಶಾಸಕ ಶರಣಗೌಡ ಕಂದಕೂರ ಒತ್ತಾಯ ಉಪ್ಪು ತಿಂದವರು ನೀರು ಕುಡಿಯಲೇ ಬೇಕು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಮಾಜಿ ಸಿಎಂ ಎಚ್‌ಡಿಕೆ ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು ಲೈಂಗಿಕ ಪ್ರಕರಣ: ಶಾಸಕ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ವಿರುದ್ಧ ಎಸ್‌ಐಟಿ ತನಿಖೆ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಇನ್ನಿಲ್ಲ ಕಾಲೇಜು ಸಹಪಾಠಿಗಳ ಮೇಲೆ ಹಲ್ಲೆ ಪ್ರಕರಣ: ಏ.28ರಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ KKRTC: ಎಲ್ಲ ಸಿಬ್ಬಂದಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ - ವಿಜಯಪುರ ಡಿಸಿ ಸ್ಪಷ್ಟನೆ ಕರ್ತವ್ಯ ನಿರತ ಸರ್ಕಾರಿ ಬಸ್‌ ನಿರ್ವಾಹಕರ ಮೇಲೆ ಹಲ್ಲೆ: ಮೂವರ ವಿರುದ್ಧ ದೂರು ದಾಖಲು