CrimeNEWSದೇಶ-ವಿದೇಶಸಿನಿಪಥ

ಸೋನಾಲಿ ಫೋಗಾಟ್‌ ಶವ ಪರೀಕ್ಷೆಗೆ ಸಂಬಂಧಿಗಳಿಂದ ಷರತ್ತುಬದ್ಧ ಒಪ್ಪಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಗೋವಾ: ಎರಡು ದಿನಗಳ ಹಿಂದೆ ಮೃತಪಟ್ಟ ಬಿಜೆಪಿ ನಾಯಕಿ ಸೋನಾಲಿ ಫೋಗಾಟ್‌ಅವರ ಶವಪರೀಕ್ಷೆಗೆ ಸಂಬಂಧಿಗಳಿಂದ ಷರತ್ತುಬದ್ಧ ಒಪ್ಪಿಗೆ ನೀಡಿದ್ದಾರೆ. ಶವಪರೀಕ್ಷೆಯ ಸಂಪೂರ್ಣ ದೃಶ್ಯವನ್ನು ಚಿತ್ರೀಕರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ಶವಪರೀಕ್ಷೆ ವರದಿ ಸಿಕ್ಕಿದ ಬಳಿಕ ಎಫ್‌ಐಆರ್‌ದಾಖಲಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ. ವಿಡಿಯೋ ಚಿತ್ರೀಕರಿಸಬೇಕು ಎಂಬ ಷರತ್ತಿನೊಂದಿಗೆ ಶವಪರೀಕ್ಷೆ ನಡೆಸಲು ಒಪ್ಪಿಗೆ ನೀಡಿದ್ದೇವೆ ಎಂದು ಗುರುವಾರ ಬೆಳಗ್ಗೆ ಸೋನಾಲಿ ಅವರ ಬಂಧು ಮೋಹಿಂದರ್‌ಫೋಗಾಟ್‌ತಿಳಿಸಿದ್ದಾರೆ.

ಗೋವಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಶವಪರೀಕ್ಷೆ ನಡೆಸಲು ಈ ಮೊದಲು ಸಮಯ ನಿಗದಿ ಪಡಿಸಲಾಗಿತ್ತು. ಆದರೆ ಸೋನಾಲಿ ಅವರ ಸಹೋದರ ರಿಂಕು ಧಾಕ ತನ್ನ ಸಹೋದರಿಯನ್ನು ಆಕೆಯ ಇಬ್ಬರು ಸಿಬ್ಬಂದಿಯೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ ಬಳಿಕ ಶವಪರೀಕ್ಷೆಯನ್ನು ತಡೆ ಹಿಡಿಯಲಾಗಿದೆ.

ಗೋವಾ ಪೊಲೀಸರು ತಮ್ಮ ಸಹೋದರಿಯ ಇಬ್ಬರು ಸಿಬ್ಬಂದಿಗಳ ಮೇಲೆ ಎಫ್‌ಐಆರ್‌ದಾಖಲಿಸಿದ ಬಳಿಕ ಆಕೆಯ ಶವಪರೀಕ್ಷೆಗೆ ಒಪ್ಪಿಗೆ ನೀಡುವುದಾಗಿ ರಿಂಕು ಧಾಕ ಪಟ್ಟುಹಿಡಿದಿದ್ದರು.

ನಟಿ, ಬಿಗ್‌ಬಾಸ್‌ಖ್ಯಾತಿಯ ಸೋನಾಲಿ ಅವರು ಗೋವಾ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಸೋಮವಾರ ರಾತ್ರಿ 7ರಿಂದ 8ರ ಸುಮಾರಿಗೆ ಸೋನಾಲಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ನಾಲ್ಕು ಫೋಟೊಗಳನ್ನು ಹಾಗೂ ಎರಡು ವಿಡಿಯೋಗಳನ್ನು ಪೋಸ್ಟ್‌ಮಾಡಿದ್ದರು.

2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಧಮ್‌ಪುರ ಕ್ಷೇತ್ರದಿಂದ ಸೋನಾಲಿ ಅವರು ಸ್ಪರ್ಧಿಸಿ, ಸೋಲುಕಂಡಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ