ಬೆಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಬೆಳವಣಿಗೆ ನೋಡಿ ಅಸಮಾಧಾನಗೊಂಡಿರುವ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ.
ದುನಿಯಾ ವಿಜಯ್ ಅವರು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ತೀವ್ರವಾಗಿ ಖಂಡಿಸುವ ರೀತಿಯಲ್ಲಿ ಮತ್ತು ದೇವರ ಮೇಲೆ ಇಟ್ಟಿರುವ ನಂಬಿಕೆಯ ಬಗ್ಗೆ ಟ್ವೀಟ್ ಮಾಡುವ ಮೂಲಕ ಒಂದು ರೀತಿಯ ಅಸಮಾಧಾನ ಹೊರಹಾಕಿದ್ದಾರ.
ನಾವು ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ತಿಳಿಸಿದ್ದಾರ.
ಇನ್ನು ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ ಎಂದು ಬರೆದುಕೊಂಡಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ#Justiceforsoujanya pic.twitter.com/wlxF84dHY4
— Duniya Vijay (@OfficialViji) August 1, 2023