ಏ.15ರಂದು ಕ್ರೀಡಾ ವಸತಿ ಶಾಲೆ, ನಿಲಯಗಳ ಪ್ರವೇಶಕ್ಕೆ ವಿಶೇಷ ಆಯ್ಕೆ ಶಿಬಿರ ಆಯೋಜನೆ- ಆಶಕ್ತರಿಗೆ ಅವಕಾಶ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ-ನಿಲಯಗಳಿಗೆ 5ನೇ ತರಗತಿ, 8ನೇ ತರಗತಿ ಮತ್ತು ಪ್ರಥಮ ಪಿಯುಸಿ ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಾಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, ಕ್ರೀಡಾ ಸಮವಸ್ತ್ರ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ದಿನಭತ್ಯೆ/ ಪ್ರಯಾಣ ಭತ್ಯೆ ಇತ್ಯಾದಿಗಳನ್ನು ಒದಗಿಸಲಾಗುತ್ತಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ಶಾಲೆ/ ನಿಲಯಗಳಲ್ಲಿ ತರಬೇತಿ ಪಡೆದ ಅನೇಕ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರ-ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ದಾಖಲಿಸಿರುತ್ತಾರೆ.
ಪ್ರಖ್ಯಾತ ಕ್ರೀಡಾಪಟುಗಳಾದ ಪ್ರಮೀಳಾ ಅಯ್ಯಪ್ಪ, ಜಿ.ಜಿ. ಶೋಭಾ, ಎಚ್.ಎಂ.ಜ್ಯೋತಿ, ಎಸ್.ಡಿ. ಈಶನ್, ಬಾಂಧವ್ಯ ಶಶಿಕಾಂತ್, ಮಲಪ್ರಭಾ ಜಾಧನ್, ಮೋಹಿತ್ ಹೆಚ್.ಎಸ್. ಪ್ರಿಯಾಂಕ ಪಿ. ಹಲವಾರು ನೂರಾರು ಕ್ರೀಡಾಪಟುಗಳು ಕ್ರೀಡಾ ವಸತಿ ಶಾಲೆ/ ನಿಲಯದಿಂದ ಹೊರಹೊಮ್ಮಿದ ಕ್ರೀಡಾಪಟುಗಳಾಗಿದ್ದಾರೆ.
ಅಲ್ಲದೇ, ಈ ವಸತಿ ಶಾಲೆ/ನಿಲಯಗಳಲ್ಲಿ ತರಬೇತಿ ಪಡೆದ ನೂರಾರು ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯ ಹಿನ್ನೆಲೆಯಲ್ಲಿ ಪೊಲೀಸ್, ರೈಲ್ವೆ ಅರಣ್ಯ, ಆದಾಯ ತೆರಿಗೆ ಇಲಾಖೆ, ಮಹಾಲೇಖಪಾಲರ ಕಛೇರಿ, ಬ್ಯಾಂಕ್‌ಗಳು ಹಾಗೂ ಇನ್ನಿತರೆ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗವನ್ನು ಪಡೆದು, ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕ್ರೀಡಾ ವಸತಿ ಶಾಲೆ / ನಿಲಯಗಳಿಗೆ ಪ್ರತೀ ವರ್ಷ ಆಯ್ಕೆ ಶಿಬಿರಗಳ ಮೂಲಕ ಕ್ರೀಡಾಪಟುಗಳ ಆಯ್ಕೆ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಭಾಗದ ಬಾಲಕ ಮತ್ತು ಬಾಲಕಿಯರಿಗೆ ಮತ್ತೊಂದು ವಿಶೇಷ ಅವಕಾಶವನ್ನು ನೀಡುವ ದೃಷ್ಟಿಯಿಂದ 2025-26 ನೇ ಸಾಲಿನಲ್ಲಿ ವಿಶೇಷ ಆಯ್ಕೆ ಶಿಬಿರ ವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಏಪ್ರಿಲ್ 15 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ವಾಲಿಬಾಲ್, ಫೆನ್ಸಿಂಗ್, ಆರ್ಚರಿ ಹಾಗೂ ಧಾರವಾಡದ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್ ವಾಲಿಬಾಲ್, ಸೈಕ್ಲಿಂಗ್, ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ ಮತ್ತು ಕಬ್ಬಡಿ, ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಪುಟ್ಬಾಲ್, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ, ಹಾಕಿ, ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ಸ್, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

ಅದೇ ರೀತಿ ಏಪ್ರಿಲ್ 17 ರಂದು ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬಾಸ್ಕೆಟ್‌ಬಾಲ್, ವಾಲಿಬಾಲ್, ಕಬಡ್ಡಿ, ಬೀದರ್ ನ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್, ಬಳ್ಳಾರಿಯ ಪುಟ್ಬಾಲ್ ಕ್ರೀಡಾಂಗಣದಲ್ಲಿ ಪುಟ್ಬಾಲ್, ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಕಿ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ತರಬೇತಿ ಆಯ್ಕೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.
ಆಯ್ಕೆ ನಿಯಮಗಳು: ರಾಜ್ಯದ ಯಾವುದೇ ಭಾಗದ ಕ್ರೀಡಾಪಟುಗಳು ಯಾವುದೇ ಸ್ಥಳದ ಆಯ್ಕೆ ಶಿಬಿರದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. 2025-26 ನೇ ಸಾಲಿನ ಪ್ರವೇಶಕ್ಕೆ ಈಗಾಗಲೇ ಆಯೋಜಿಸಲಾದ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸದ ಅಭ್ಯರ್ಥಿಗಳು ಈ ವಿಶೇಷ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಬಹುದು.
ಈಗಾಗಲೇ ಆಯ್ಕೆ ಶಿಬಿರಗಳಲ್ಲಿ ಭಾಗಿಯಾಗಿರುವ ಆದರೆ, ರಾಜ್ಯ ಮಟ್ಟದ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗದ ಅಭ್ಯರ್ಥಿಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ಉದ್ದೇಶಿಸಿದಲ್ಲಿ ಈ ಬಗ್ಗೆ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ದಾಖಲಿಸಿ, ವಿಶೇಷ ಆಯ್ಕೆ ಶಿಬಿರದಲ್ಲಿ ಭಾಗವಹಿಸಬಹುದು. ರಾಜ್ಯ ಮಟ್ಟದ ಆಯ್ಕೆ ಶಿಬಿರಕ್ಕೆ ಈಗಾಗಲೇ ಆಯ್ಕೆಯಾಗಿರುವವರು ಈ ವಿಶೇಷ ಆಯ್ಕೆ ಶಿಬಿರಗಳಲ್ಲಿ ಭಾಗವಹಿಸುವ ಅವಶ್ಯಕತೆ ಇಲ್ಲ.
8 ನೇ ತರಗತಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳು ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 8ನೇ ತರಗತಿ ಪ್ರವೇಶಕ್ಕೆ ಜೂನ್-2025 ಕ್ಕೆ ಅನ್ವಯವಾಗುವಂತೆ 14 ವರ್ಷ ವಯಸ್ಸಿನ ಒಳಗೆ ಇರಬೇಕು. ಪ್ರಥಮ ಪಿ.ಯು.ಸಿ. ಪ್ರವೇಶ ಬಯಸುವ ಅಭ್ಯರ್ಥಿಗಳ ವಯಸ್ಸು ಜೂನ್-2025 ಕ್ಕೆ ಅನ್ವಯವಾಗುವಂತೆ 18 ವರ್ಷ ವಯಸ್ಸಿನ ಒಳಗೆ ಇರಬೇಕು.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಆಯಾ ಸ್ಥಳಗಳಲ್ಲಿ ಬೆಳಿಗ್ಗೆ 9-00 ಗಂಟೆಗೆ ವರದಿ ಮಾಡಿಕೊಳ್ಳತಕ್ಕದ್ದು. ವಾಲಿಬಾಲ್ ಮತ್ತು ಬಾಸ್ಕೆಟ್‌ಬಾಲ್ ಹೊರತುಪಡಿಸಿ, ಇತರೆ ಕ್ರೀಡೆಗಳಲ್ಲಿ ಅಸಾಧಾರಣ ಸಾಧನೆ ತೋರುವ ಕ್ರೀಡಾಪಟುಗಳಿಗೆ ಎತ್ತರದ (Height) ಅರ್ಹತಾ ಮಾನದಂಡದಲ್ಲಿ ಸಡಿಲಿಕೆ ನೀಡಲಾಗುವುದು.
ಈ ಶಿಬಿರಗಳಲ್ಲಿ ಭಾಗವಹಿಸಿ ಆಯ್ಕೆಯಾದ ಕ್ರೀಡಾಪಟುಗಳು ರಾಜ್ಯ ಮಟ್ಟದ ಆಯ್ಕೆ ತರಬೇತಿ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿ, ಅರ್ಹರಾದಲ್ಲಿ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಯುವ ಸಹಾಯವಾಣಿ ಸಂಖ್ಯೆ: 155265 ಅಥವಾ ನಿಮ್ಮ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.
Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...