NEWSನಮ್ಮರಾಜ್ಯಮೈಸೂರುಸಂಸ್ಕೃತಿ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ: ವಿಶೇಷ ರೈಲುಗಳು ಸಂಚಾರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸೆ.23ರಂದು ಉದ್ಘಾಟನೆಗೊಳ್ಳಲಿದ್ದು, ಈ ದಸರಾ ಹಬ್ಬ ಕಣ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ. ರೈಲು ಸಂಖ್ಯೆ, ದಿನಾಂಕ, ಸ್ಥಳ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದ್ದು, ರೈಲು ಸಂಖ್ಯೆ 06271/06272: ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು:

ರೈಲು ಸಂಖ್ಯೆ 06271 2025ರ ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06272 2025ರ ಅಕ್ಟೋಬರ್ 1 ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್‌ಆರ್‌ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು:
ರೈಲು ಸಂಖ್ಯೆ 06273 2025ರ ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3 ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 06274 2025ರ ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಬೆಂಗಳೂರಿನ ಎಸ್‌ಎಂವಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಎಸ್‌ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

Advertisement

ರೈಲು ಸಂಖ್ಯೆ 06275/06276 ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು: ರೈಲು ಸಂಖ್ಯೆ 06275 2025ರ ಅಕ್ಟೋಬರ್ 4 ರಂದು ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06276 2025ರ ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 5ಕ್ಕೆ ಬೆಂಗಳೂರಿನ ಎಸ್‌ಎಂವಿಟಿಗೆ ತಲುಪಲಿದೆ. ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್‌ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ಎಲ್ಲಾ ರೈಲುಗಳು (06271/06272, 06273/06274 ಮತ್ತು 06275/06276) ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌/ಡಿ ಬೋಗಿಗಳು ಇರಲಿವೆ.

ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳುಬೇಕು, ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು, ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.

ವಿಜಯಪಥ - vijayapatha.in
Megha
the authorMegha

Leave a Reply

error: Content is protected !!