NEWSನಮ್ಮಜಿಲ್ಲೆಸಂಸ್ಕೃತಿ

ಶ್ರೀರಂಗಪಟ್ಟಣ: ತೀವ್ರ ವಿವಾದದ ನಡುವೆಯೇ ಟಿಪ್ಪು ಜಯಂತಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ತೀವ್ರ ವಿವಾದಗಳ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ನಡೆಯುತ್ತಿದ್ದು, ಟಿಪ್ಪು ವಕ್ಫ್​ ಎಸ್ಟೇಟ್​ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ವಿವಾದದ ಹಿನ್ನೆಲೆಯಲ್ಲಿ 2019ರಲ್ಲೇ ಹಿಂಪಡೆಯಲಾಗಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಈ ಬಾರಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ತಿಳಿಸಲಾಗಿದೆ.

ಆದರೆ, ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆ ಇಲ್ಲದ ಕಾರಣ ಟಿಪ್ಪು ವಕ್ಫ್​ ಎಸ್ಟೇಟ್ ಇಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶ್ರೀರಂಗಪಟ್ಟಣದ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಇಂದು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ..? ಟಿಪ್ಪು ಜಯಂತಿ ಆಚರಣೆ ಹೆಸರಿನಲ್ಲಿ ಶ್ರೀರಂಗಪಟ್ಟಣದಲ್ಲಿ ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ , ಯಾವುದೇ ಘೋಷಣೆ ಕೂಗಬಾರದು, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ರದ್ದುಗೊಳಿಸಿ ಆದೇಶ ಹೊರಡಿಸಿತ್ತು.

ಮತ್ತೆ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ. ಪಾಟೀಲ್‌ ವಿವರಿಸಿದ್ದಾರೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!