NEWSನಮ್ಮರಾಜ್ಯಶಿಕ್ಷಣ-

SSLC ಮಕ್ಕಳು ಯಾವುದಕ್ಕೂ ಕಿವಿಗೊಡದೆ ಪರೀಕ್ಷೆಗೆ ತಯಾರಾಗಿ

ಪರೀಕ್ಷೆ ಬೇಕೋ ಬೇಡವೋ ಎಂಬ ಶಿಕ್ಷಣ ಸಚಿವ ಪ್ರಶ್ನೆಗೆ ಬೇಕೇಬೇಕು ಎಂದ ವಿದ್ಯಾರ್ಥಿಗಳು   

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾಗಿ SSLC ಪರೀಕ್ಷೆಗಳನ್ನು  ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ತಾವೇ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ಮಕ್ಕಳಿಗೆ ತಾವೇ ಫೋನ್ನಲ್ಲಿ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರಲ್ಲದೇ ಶಿಕ್ಷಣ ಇಲಾಖೆ ವತಿಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ‌ ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ ಬಿತ್ತರಿಸಲಾಗುವುದಿದ್ದು, ಅದನ್ನು ಫಾಲೋ ಮಾಡಬೇಕೆಂದು ಸಲಹೆ ಮಕ್ಕಳಿಗೆ ನೀಡಿದರು.

ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದರು. ಇಲಾಖೆಯ ಆಯುಕ್ತರ ಹಂತದಿಂದ ಹಿಡಿದು ನಿರ್ದೇಶಕರು, ಉಪನಿರ್ದೇಶಕರು, ಬಿಇಒ, ಕ್ಲಸ್ಟರ್ ಹಾಗೂ ಶಾಲಾಮುಖ್ಯೋಪಾಧ್ಯಾಯರು, ಶಿಕ್ಷಕರು ಹಂತದವರೆಗೂ ಎಲ್ಲರೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಸಮರೋಪಾದಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ್ದರು. ಅದರ ಭಾಗವಾಗಿ ಇಂದು ತಾವೇ ಮಕ್ಕಳೊಂದಿಗೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ವಿಶೇಷವಾಗಿತ್ತು.

ಬಳ್ಳಾರಿಯ ಲಿಟ್ಲ್ ಫ್ಲವರ್ ಶಾಲೆಯ ಸಹನಾ, ಛತ್ರಪತಿ ಶಿವಾಜಿ ಶಾಲೆಯ ಬಸವರಾಜ್, ಕೊಪ್ಪಳದ ಸರ್ಕಾರಿ ಪ್ರೌಢಶಾಲೆಯ ರವಿಕುಮಾರ್, ರಾಯಚೂರಿನ ವಿಶಾಲ್ ಮತ್ತು ಮಧುಕುಮಾರಿ ಅವರನ್ನು ತಾವೇ ಫೋನ್  ಮಾಡಿದ ಸಚಿವರು, ಏನಪ್ಪಾ, ಏನಮ್ಮಾ ಹೇಗೆ ಓದ್ತಾ ಇದ್ದೀರಿ, ಏನ್ ಓದ್ತಾ ಇದೀರಿ, ಪರೀಕ್ಷೆಗೆ ರೆÀಡಿ ಇದ್ದೀರಾ,ಸ್ಟಡಿ ಹಾಲಿಡೇಸ್ ಹೇಗೆ ಕಳೆಯುತ್ತಿದ್ದೀರಿ, ಮಾಸ್ಕ್ ಹಾಕಿಕೊಂಡಿದ್ದೀರಾ, ಪರೀಕ್ಷೆಗೆ ಸಜ್ಜಾಗಿದ್ದೀರಾ ಎಂದು ಪ್ರಶ್ನಿಸಿಮಕ್ಕಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡರು.

ಲಾಕ್ಡೌನ್ ಮುಗಿಯುತ್ತಿದ್ದಂತೆ ಪರೀಕ್ಷೆ ಆರಂಭವಾಗುತ್ತೇ, ನೀವು ಯಾವ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಸಚಿವರು ಮಕ್ಕಳಿಗೆ ಹೇಳಿದರು. ಆ ಕಡೆಯಿಂದ ಮಕ್ಕಳೂ ಸಹ ಸಚಿವರಿಗೆ ಪ್ರಶ್ನೆ ಕೇಳಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು.

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!