ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಹಾಗೂ ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಅನ್ನು ಮೇ 26 ರಿಂದ ಜೂನ್ 2 ರವರೆಗೆ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಹಾಗೂ ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-2ರಲ್ಲಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರಾಗಿದ್ದವರು, ಪೂರ್ಣಗೊಳಿಸದೆ ಇರುವ ಮತ್ತು ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಉತ್ತಮಗೊಳಿಸಿಕೊಳ್ಳಲು ಇದು ಸೂಕ್ತ ಸಮಯವಾಗಿದೆ.
ಹೀಗಾಗಿ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಜಾಲತಾಣದ ಮೂಲಕ ಲಾಗಿನ್ ಮಾಡಿಕೊಂಡು ಪರೀಕ್ಷೆ-2 ಕ್ಕೆ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಪರೀಕ್ಷೆ-2 ರ ನೋಂದಣಿ ಮತ್ತು ಇತ್ಯಾದಿ ವಿಷಯಗಳ ಕುರಿತು ಸಹಾಯವಾಣಿ ಸಂಖ್ಯೆ 080-23310075 ಮತ್ತು 080-23310076 ಇದಕ್ಕೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Related
