ಮೇ 26ರಿಂದ ಜೂ.2ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಇದೇ ಮೇ 26 ರಿಂದ ಜೂನ್2ರವರೆಗೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಕರೆದುಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಶಾಲೆ ಹೊರತಾಗಿ ಇತರೆ ಶಾಲೆ-ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಬೇಕು ಎಂದು ಚಾಲನಾ ಸಿಬ್ಬಂದಿಗೆ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಜೂನ್ 2 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ-2 ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳ ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಬೇಕು. ಅಲ್ಲದೆ ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ ನಿಲುಗಡೆಯನ್ನು ನೀಡಲು ಚಾಲನಾ ನಿಬ್ಬಂದಿಗಳಿಗೆ ತಿಳಿಸಬೇಕು. ಇನ್ನು ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುಕ್ತವಾಗಿ ವರ್ತಿಸಬೇಕು.
ಈ ಅಂಶಗಳ ಬಗ್ಗೆ ಎಲ್ಲ ಚಾಲನಾ ಸಿಬ್ಬಂಬಗಳಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ/ ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಘಟಕ ವ್ಯವಸ್ಥಾಪಕರು ನೋಡಿಕೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ನೀಡಿದ್ದಾರೆ.

Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...