NEWSನಮ್ಮರಾಜ್ಯಶಿಕ್ಷಣ

ಮೇ 26ರಿಂದ ಜೂ.2ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಇದೇ ಮೇ 26 ರಿಂದ ಜೂನ್‌2ರವರೆಗೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಕರೆದುಕೊಂಡು ಹೋಗಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಮೇ 26 ರಿಂದ ಜೂನ್‌ 2ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅವರ ಶಾಲೆ ಹೊರತಾಗಿ ಇತರೆ ಶಾಲೆ-ಕಾಲೇಜಿನ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಬೇಕು ಎಂದು ಚಾಲನಾ ಸಿಬ್ಬಂದಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಜೂನ್‌ 2 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ-2 ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳ ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಬೇಕು. ಅಲ್ಲದೆ ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ ನಿಲುಗಡೆಯನ್ನು ನೀಡಲು ಚಾಲನಾ ನಿಬ್ಬಂದಿಗಳಿಗೆ ತಿಳಿಸಬೇಕು. ಇನ್ನು ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುಕ್ತವಾಗಿ ವರ್ತಿಸಬೇಕು.

ಈ ಅಂಶಗಳ ಬಗ್ಗೆ ಎಲ್ಲ ಚಾಲನಾ ಸಿಬ್ಬಂಬಗಳಿಗೆ ಸೂಕ್ತ ಮಾಹಿತಿ ಒದಗಿಸಲು ಮತ್ತು ಘಟಕಗಳ/ ಬಸ್ ನಿಲ್ದಾಣಗಳ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು/ ಘಟಕ ವ್ಯವಸ್ಥಾಪಕರು ನೋಡಿಕೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ನೀಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ