NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷಾ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿ ಕೊನೇ ಸ್ಥಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.40 ಮಂದಿ ತೇರ್ಗಡೆಯಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. SSLC ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದ್ದು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ.

ಉಡುಪಿ ಜಿಲ್ಲೆಗೆ ಮೊದಲ ಸ್ಥಾನ: ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.

ಈ ಬಾರಿ 436138 ವಿದ್ಯಾರ್ಥಿಗಳು, 423829 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಇನ್ನು ಈ ಬಾರಿ ಪರೀಕ್ಷೆ ಬರೆದ 436138 ವಿದ್ಯಾರ್ಥಿಗಳಲ್ಲಿ 287416 ಮಂದಿ ಹುಡುಗರು ಪಾಸ್‌ ಆಗಿದ್ದಾರೆ. ಅಂದರೆ ಶೇಕಡವಾರು 65.90 ಫಲಿತಾಂಶ ಬಂದಿದೆ. ಅದೇರೀತಿ 423829 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಅವರಲ್ಲಿ 343778 ಮಂದಿ ಹುಡುಗಿಯರು ಪಾಸಾಗಿದ್ದು, ಶೇ.81.11ರಷ್ಟು ಫಲಿತಾಂಶವನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.

ಇನ್ನು ನಗರ ಪ್ರದೇಶದಲ್ಲಿ 493900 ಮಂದಿ ಪರೀಕ್ಷೆ ಬರೆದಿದ್ದು, ಅದರಲ್ಲಿ 359711 ವಿದ್ಯಾರ್ಥಿಗಳು ತೇಗರ್ಡೆಯಾಗುವ ಮೂಲಕ ಶೇ.72.83ರಷ್ಟು ಫಲಿತಾಂಶ ತಂದುಕೊಟ್ಟರೆ, ಗ್ರಾಮೀಣ ಪ್ರದೇಶದಲ್ಲಿ 366067 ಮಂದಿ ಪರೀಕ್ಷೆ ಬರೆದಿದ್ದು ಅವರಲ್ಲಿ 271501 ಪಾಸಾಗಿ, ಅಂದರೆ ಶೇ. 74.17 ರಷ್ಟು ಫಲಿತಾಂಶ ದಾಖಲಿಸಿದ್ದಾರೆ.

ಇಲ್ಲಿ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರು ಹೆಚ್ಚು ಪಾಸಾಗಿ ಮೇಲುಗೈ ಸಾಧಿಸಿದ್ದರೆ ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆಯಾಗಿ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರಪ್ರದೇಶದ ವಿದ್ಯಾರ್ಥೀಗಳನ್ನು ಹಿಂದಿಕ್ಕಿರುವುದು ಕೆಲ ಸೌಲಭ್ಯ ವಂಚಿತ ವಿದ್ಯಾರ್ಥಿಗಳ ಸಾಧನೆ ಎಂದೆ ಹೇಳಬಹುದು.

ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ: ಬಾಗಲಕೋಟೆಯ ಮುಧೋಳ್‌ನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ರ‍್ಯಾಂಕ್‌ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮತ್ತು ಪಾಲಕರಿಗೆ ಕೀರ್ತಿತಂದಿದ್ದಾರೆ. ಇವರು ಮುಂದೆ ಐಎಎಸ್‌ ಮಾಡಬೇಕು ಎಂಬ ಗುರಿಹೊಂದಿರುವುದಾಗಿ ತಿಳಿಸಿದ್ದಾರೆ.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ವಿವರ
ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ), ಮೇದಾ ಪಿ ಶೆಟ್ಟಿ ( ಬೆಂಗಳೂರು) 624, ಹರ್ಷಿತಾ ಡಿಎಂ (ಮಧುಗಿರಿ), ಚಿನ್ಮಯ್ (ದಕ್ಷಿಣ ಕನ್ನಡ), ಸಿದ್ದಾಂತ್ (ಚಿಕ್ಕೊಡಿ ), ದರ್ಶನ್ (ಶಿರಸಿ), ಚಿನ್ಮಯ್ (ಶಿರಸಿ), ಶ್ರೀರಾಮ್ (ಶಿರಸಿ).

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ