Please assign a menu to the primary menu location under menu

NEWSನಮ್ಮರಾಜ್ಯಶಿಕ್ಷಣ-

ನಾಳೆ SSLC ಪರೀಕ್ಷಾ ಫಲಿತಾಂಶ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ನಾಳೆ (ಮೇ 9) SSLC ಫಲಿತಾಂಶಗಳ ಘೋಷಣೆ ಮಾಡುವುದಾಗಿ ಮಂಡಳಿಯ ಅಧ್ಯಕ್ಷರು ಇಂದು ತಿಳಿಸಿದ್ದಾರೆ.

ಈ ಸಂಬಂಧ ಇಂದು ಪತ್ರಿಕಾ ಹೇಳಿಕೆ ಹೊರಡಿಸಿರುವ ಅಧ್ಯಕ್ಷರು, ಗುರುವಾರ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದು ನಾಳೆ ಬೆಳಗ್ಗೆ 10.30 ಗಂಟೆಗೆ ಮಂಡಳಿಯು ಮಹತ್ವದ ಸುದ್ದಿಗೋಷ್ಟಿ ಕರೆದಿದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಂಡಳಿ ಮಾಡಿಕೊಂಡಿದ್ದು, ಗುರುವಾರ ಬೆಳಗ್ಗೆ ರಾಜ್ಯದ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೊರಬೀಳಲಿದೆ. ಬೆಳಗ್ಗೆ 11.30 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

2023- 2024ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಗಳನ್ನು ಕಳೆದ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್‌ನಲ್ಲೇ ಆರಂಭವಾಗಿತ್ತು. ಹೀಗಾಗಿ ಮೇ 9 ರಂದು ರಾಜ್ಯದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEAB) ಅಧಿಕಾರಿಗಳು karresults.nic.in ಮತ್ತು kseab.karnataka.gov.in.ನಲ್ಲಿ SSLC ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಸಂಖ್ಯೆ, ಹುಟ್ಟಿದ ದಿನಾಂಕ ಹಾಗೂ ಇತರ ವಿವರಗಳನ್ನು ನೀಡ ಬೇಕಿದೆ.

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?: 1. ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.

  1. ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2024 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

  2. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್