NEWSನಮ್ಮರಾಜ್ಯಶಿಕ್ಷಣ-

ಇಂದು SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಜೂನ್‌ 12ರಿಂದ ಜೂನ್‌ 19ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು (ಜೂನ್‌ 30) 11ಗಂಟೆಗೆ ಹೊರಬೀಳಲಿದೆ.

ಜೂನ್ 2023ರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.

ರಾಜ್ಯದಲ್ಲಿ ಈಗಾಗಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ದಿನಾಂಕ ಮುಗಿಯುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ಮುಂದಾಗಿದೆ.

ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಿ. ಕೂಡಲೇ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣುತ್ತದೆ. ಫಲಿತಾಂಶ ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

2023 ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 8,35,102 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಒಟ್ಟಾರೆ ಶೇಕಡ 83.89 ರಷ್ಟು ಫಲಿತಾಂಶ ದಾಖಲಾಗಿತ್ತು. 3,59,511 ಬಾಲಕಿಯರು ಹಾಗೂ 3,41,108 ಬಾಲಕರು ಉತ್ತೀರ್ಣರಾಗಿದ್ದರು.

Leave a Reply

error: Content is protected !!
LATEST
NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ...