NEWSನಮ್ಮರಾಜ್ಯಶಿಕ್ಷಣ-

SSLC ಪರೀಕ್ಷೆ ನಡೆಯುತ್ತದೆ ಹತಾಶರಾಗದೆ ಅಧ್ಯಯನಶೀಲರಾಗಿ

ತುಮಕೂರು ಸಿದ್ಧಗಂಗಾ ಮಠದಲ್ಲಿ ವಿದ್ಯಾರ್ಥಿಗಳಿಗೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಮೇ 3ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ SSLC ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ಭುಧವಾರ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿನೀಡಿ ಶ್ರೀ ಸಿದ್ಧಲಿಂಗಸ್ವಾಮೀಜಿ ಅವರ ದರ್ಶನ ಮಾಡಿ ವಸತಿ ಶಾಲೆಯಲ್ಲಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು.

ಶ್ರೀ ಮಠದಲ್ಲಿ 1320 SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇರುವುದನ್ನು ಖಚಿತಪಡಿಸಿಕೊಂಡು ಈ ವಿದ್ಯಾರ್ಥಿಗಳಲ್ಲಿರುವ ಸಂಶಯ ಮತ್ತು ಸಂದೇಹಗಳಿಗೆ ಪರಿಹಾರ ಸೂಚಿಸುವ ಸಲುವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಉತ್ಸಾಹದಿಂದ ಓದಿನಲ್ಲಿ ಪ್ರವೃತ್ತರಾಗುವಂತೆ ಮನವೊಲಿಸುವ ಸಲುವಾಗಿ ಮಠಕ್ಕೆ ಭೇಟಿ ನೀಡಿದ್ದೇನೆಂದು ತಿಳಿಸಿದರು.

ರಾಜ್ಯದಲ್ಲಿ 8.50 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವವರಿದ್ದು, ಅವರೊಂದಿಗೆ ಪೋನ್ಇನ್ ಕಾರ್ಯಕ್ರಮದ ಮೂಲಕ ನೇರವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಪರೀಕ್ಷೆ ನಡೆಯುವವರೆಗೆ ಸಂಯಮ ಕಾಪಾಡಿಕೊಳ್ಳಲು ಧೈರ್ಯ ಹೇಳಲಾಗುತ್ತಿದೆ. ತಡವಾದರೂ ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡಿ ಹಾಗೂ ಪರೀಕ್ಷೆಯ ಮುನ್ನ ಪುನರ್ಮನನ ತರಗತಿಗಳನ್ನು ನಡೆಸಿ ಪರೀಕ್ಷೆ ನಡೆಸುವ ದಿನವನ್ನು ಸರ್ಕಾರ ಶಿಕ್ಷಣ ಇಲಾಖೆಯ ಮೂಲಕ ಪ್ರಕಟಿಸಲಿದೆ ಎಂದು ತಿಳಿಸಿದರು.

ಸರ್ಕಾರ ನಿರ್ಧಾರ ಪ್ರಕಟಿಸುವ ಮೊದಲು ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳುವುದು ಅಥವಾ ಶುಲ್ಕ ಪಡೆಯುವುದು ಸಮಂಜಸವಲ್ಲವೆಂದುತಿಳಿ ಸಿದರು. ಪ್ರಸಕ್ತ ಸಮಯದಲ್ಲಿ ಸಮಾಜದ ಎಲ್ಲಾ ತರಹದ ಜನರ ಆರ್ಥಿಕ ಸ್ಥಿತಿ ಜರ್ಜರಿತವಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಶಾಲಾ ಶುಲ್ಕ ವಿಧಿಸುವ ಬಗ್ಗೆ ಸರ್ಕಾರ ಚರ್ಚಿಸಿ ತೀರ್ಮಾನ ಕೈಗೊಂಡು ಪ್ರಕಟಿಸಲಿದೆ ಎಂದು ಸಚಿವರು ಹೇಳಿದರು.

ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುತ್ತದೆ.  ವಿದ್ಯಾರ್ಥಿಗಳು ನಮ್ಮ ವೇಳೆಯಲ್ಲಿಯೇ ಕೊರೋನಾ ಬಂದಿದೆ ಎಂದು ಬೇಜಾರು ಮಾಡಿಕೊಳ್ಳದೆ ಸಂಯಮದಿಂದ ಇದ್ದು, ಜೀವನ ಪರೀಕ್ಷೆಯಾಗಿರುವ ಕೊರೋನಾ ಮಾರಿಯನ್ನು ಸಮರೋಪಾದಿಯಲ್ಲಿ ಗೆದ್ದು, ನಂತರ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಅಣಿಯಾಗಬೇಕೆಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ಆರೋಗ್ಯದ ಬಗ್ಗೆಯೂ ಸಹ ಗಮನಹರಿಸಬೇಕು. ಪುಣ್ಯಕ್ಷೇತ್ರವಾದ ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೀವೇ ಧನ್ಯರು ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳುವ ಅವಕಾಶ ನೀಡಿ ಅವರಲ್ಲಿರುವ ಸಂದೇಹ, ಸಂಶಯಗಳಿಗೆ ಸಚಿವರು ಉತ್ತರಿಸಿದರು.

ಶಿಕ್ಷಣ ಇಲಾಖೆ ಆಯುಕ್ತ ಡಾ: ಜಗದೀಶ್ ವಿದ್ಯಾರ್ಥಿಗಳನ್ನುದ್ದೇಶಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪ್ರಶ್ನೆಪತ್ರಿಕೆಗಳಿಗೆ ಸೀಮಿತವಾಗಿ ಅಧ್ಯಯನ ಮಾಡದೇ ಇಡೀ ಪಠ್ಯಪುಸ್ತಕವನ್ನು ಅರ್ಥ ಮಾಡಿಕೊಳ್ಳುವ ರೀತಿಯಲ್ಲಿ ಅಭ್ಯಾಸ ನಡೆಸಿ ಪರೀಕ್ಷೆ ಯಾವಾಗಲಾದರೂ ನಡೆಯಲಿ ಅದಕ್ಕೆ ನಾವು ಸಿದ್ಧರಾಗಿದ್ದೇವೆ ಎಂಬ ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸವನ್ನು ರೂಢಿಸಿಕೊಳ್ಳುವಂತೆ ಸಲಹೆ ಮಾಡಿದರು.

ಸಮಾರಂಭದ ಸಾನಿಧ್ಯವಹಿಸಿದ್ದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಉಪನಿರ್ದೇಶಕರುಗಳಾದ ಕಾಮಾಕ್ಷಮ್ಮ ಹಾಗೂ ರೇವಣಸಿದ್ಧಪ್ಪ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!