NEWSನಮ್ಮಜಿಲ್ಲೆಬೆಂಗಳೂರು

ಬೆಂಗಳೂರು ಟ್ರಾಫಿಕ್‌ ನಿಯಂತ್ರಣಕ್ಕೆ ದೆಹಲಿ ಮಾದರಿ ಪ್ರೀಮಿಯಂ ಬಸ್‌ ಸಂಚಾರ BMTC ಮೂಲಕ ಆರಂಭಿಸಿ:  ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್‌ ಹಾಗೂ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸಂಚಾರವನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಬಿಎಂಟಿಸಿ ಮೂಲಕ ಆರಂಭಿಸಬೇಕು ಎಂದು ರಾಜ್ಯ ಸರ್ಕಾರವನ್ನು  ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

ಈ ವಿಚಾರವಾಗಿ ಇಂದು ಸುದ್ದಿಗಾರರಿಗೆ  ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಅವರು,   ದೆಹಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸರ್ಕಾರವು “ಪ್ರೀಮಿಯಂ ಬಸ್‌ ಅಗ್ರಿಗೇಟರ್‌ ಪಾಲಿಸಿ 2023″ಗೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಇನ್ನು ಈ ಮೂಲಕ ದೆಹಲಿಯಲ್ಲಿ ಬಡತನ ರೇಖೆಗಿಂತ ಮೇಲಿರುವ ಮಧ್ಯಮ ವರ್ಗ ಹಾಗೂ ಶ್ರೀಮಂತ ವರ್ಗದವರನ್ನು ಬಸ್‌ಗಳಲ್ಲಿ ಸಂಚರಿಸುವಂತೆ ಉತ್ತೇಜನ ನೀಡುವ ಸಲುವಾಗಿ ಆ್ಯಪ್‌ ಆಧಾರಿತ ಆನ್‌ಲೈನ್‌ ಬಸ್‌ ಸೇವೆ ಯೋಜನೆಯನ್ನು ಆರಂಭಿಸಿದೆ. ಇ-ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ರಾಜ್ಯಪಾಲರ ಅನುಮೋದನೆ ಸಿಗುತ್ತಿದ್ದಂತೆ ಪ್ರೀಮಿಯಂ ಬಸ್‌ ಸೇವೆಗೆ ಚಾಲನೆ ಸಿಗಲಿದೆ ಎಂದರು.

ಬೆಂಗಳೂರಲ್ಲೂ ಕೂಡ ಬಡವರು ಮತ್ತು ಬಡ ಮಧ್ಯಮ ವರ್ಗದವರು ಬಸ್‌ಗಳಲ್ಲಿ ಸಂಚರಿಸುತ್ತಾರೆ. ಹಾಗೆಯೇ ಮಧ್ಯಮ ವರ್ಗದವರು ಮತ್ತು ಶ್ರೀಮಂತ ವರ್ಗದವರು ತಮ್ಮ ಖಾಸಗಿ ವಾಹನಗಳನ್ನು ಬಿಟ್ಟು ಬಸ್‌ಗಳಲ್ಲೇ ದಿನನಿತ್ಯ ಓಡುವಂತೆ ಉತ್ತೇಜನ ನೀಡುವ ಸಲುವಾಗಿ ದೆಹಲಿ ಮಾದರಿಯ ಪ್ರೀಮಿಯಂ ಬಸ್‌ಗಳ ಸೇವೆಯನ್ನು ರಾಜ್ಯದ ಬೆಂಗಳೂರಿನಂತಹ ನಗರಗಳಲ್ಲಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರನ್ನು ಒತ್ತಾಯಿಸಿದರು.

ಎಸಿ, ವೈಫೈ, ಜಿಪಿಎಸ್‌, ಸಿಸಿಟಿವಿ ಸೇರಿದಂತೆ ಲಕ್ಸೂರಿ ಖಾಸಗಿ ವಾಹನಗಳಲ್ಲಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಒಳಗೊಂಡ ಆಧುನಿಕ ಬಸ್‌ಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮೂಲಕ  ಸಂಚಾರ ಆರಂಭಿಸಿದರೆ ಸ್ವಂತ ಕಾರುಗಳನ್ನು ಬಿಟ್ಟು ಬಸ್‌ಗಳಲ್ಲೇ ಸಂಚರಿಸಲು ಆರಂಭಿಸುತ್ತಾರೆ. ಈ ಮೂಲಕ ಸಂಚಾರ ದಟ್ಟಣೆ, ವಾಯು ಮಾಲಿನ್ಯದಂತಹ ಪ್ರಮುಖ ಸಮಸ್ಯೆಗಳನ್ನು ಹತೋಟಿಗೆ ತರಬಹುದು ಎಂದು ಅಭಿಪ್ರಾಯಪಟ್ಟರು.

ಪ್ರೀಮಿಯಂ ಬಸ್‌ಗಳಲ್ಲಿ ಆನ್‌ಲೈನ್‌ ಮೂಲಕ ಸೀಟ್‌ ಕಾಯ್ದಿರಿಸುವುದು ಹಾಗೂ ಪೇಮೆಂಟ್‌ ಮಾಡುವ ಅವಕಾಶವಿದೆ. ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ. ಎಲ್ಲರಿಗೂ ಆಸನಗಳು ಸಿಗಲಿವೆ. ಬಸ್‌ ಒಳಗೆ ಟಿಕೆಟ್‌ ಹರಿಯುವ ಸಂಪ್ರದಾಯ ಇರುವುದಿಲ್ಲ. ನೂಕುನುಗ್ಗಲು, ಅನವಶ್ಯಕ ಗದ್ದಲ ಇರುವುದಿಲ್ಲ. ಸ್ವಂತ ಗಾಡಿಯಲ್ಲಿ ಆರಾಮದಾಯಕವಾಗಿ, ಅನುಕೂಲಕರವಾಗಿ ಪ್ರಯಾಣಿಸಿದಂತೆ ದಿನನಿತ್ಯ ಓಡಾಡಬಹುದು ಎಂದು ಜಗದೀಶ್‌ ವಿವರಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು 190 ಕಿ.ಮೀ. ಉದ್ದದ ಸುರಂಗ ಮಾರ್ಗವನ್ನು ಕೊರೆಯಲು ಡಿ.ಕೆ.ಶಿವಕುಮಾರ್‌ ಅವರು ಮುಂದಾಗಿದ್ದಾರೆ. ಇಂತಹ ಅಪಾಯಕಾರಿ ಮತ್ತು ಅವೈಜ್ಞಾನಿಕ ಯೋಜನೆಗಳಿಗೆ ಕೈಹಾಕುವ ಬದಲು ದೆಹಲಿ ಸರ್ಕಾರದ  ಕ್ರಾಂತಿಕಾರಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸುವುದು ಉತ್ತಮ ಎಂದರು.

ಸಲೀಂ ಅವರಂತಹ ದಕ್ಷ ಅಧಿಕಾರಿಗಳನ್ನು ನೇಮಿಸಿ: ಬೆಂಗಳೂರು ನಗರದ ವಾಹನಗಳ ಸುಗಮ ಸಂಚಾರ ಹಾಗೂ ಸಂಚಾರ ನಿಯಮಗಳ ಜಾರಿ ಹೊಣೆಯನ್ನು ನಿರ್ವಹಿಸಲು ಹೊಸದಾಗಿ ಸೃಷ್ಟಿಸಿದ್ದ ಬೆಂಗಳೂರು ವಿಶೇಷ ಟ್ರಾಫಿಕ್ ಕಮಿಷನರ್ ಹುದ್ದೆಯನ್ನು ಮರು ಸ್ಥಾಪಿಸಬೇಕು ಹಾಗೂ ಸಮರ್ಥವಾಗಿ ನಿಭಾಯಿಸುತ್ತಿದ್ದ ಎಡಿಜಿಪಿ, ವಿಶೇಷ ಕಮಿಷನರ್‌ ಎಂ.ಎ.ಸಲೀಂ ಅವರನ್ನು ಪುನಃ ಮುಂದುವರಿಸಬೇಕು ಅಥವಾ ಅಂಥ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಜಗದೀಶ್‌ ವಿ ಸದಂ ಒತ್ತಾಯಿಸಿದರು.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!