NEWSನಮ್ಮರಾಜ್ಯರಾಜಕೀಯ

ಫೆ.16ರಂದು ರಾಜ್ಯ ಬಜೆಟ್‌ ಮಂಡನೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಬರು ಲೋಕಸಭೆ ಚುನಾವಣೆಗೆ ಮಾರ್ಚ್​ ತಿಂಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ 16ರಂದು ಮಂಡಿಸಲಾಗುವುದು.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಫೆಬ್ರವರಿ 12 ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯಲಿದ್ದು ಈ ನಡುವೆಯೇ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಫೆಬ್ರವರಿ 12ರಂದು ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರಂದು ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 75,000 ಕೋಟಿ ರೂ. ವೆಚ್ಚವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಇದರ ಜತೆ ಜತೆಗೆ ಮತ್ತಷ್ಟು ಜನಪ್ರಿಯ ಯೋಜನಗೆಳನ್ನು ಘೋಷಿಸಲಾಗುತ್ತದೆಯೇ ಎಂದು ಕಾತುರದಿಂದ ಜನತೆ ಕಾಯುತ್ತಿದ್ದಾರೆ. ಜನತೆಯ ಭರವಸೆಯನ್ನು ಹುಸಿಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಕಾಡಿಕೊಂಡು ಬರುತ್ತಾರೆಯೇ ಎಂಬುದಕ್ಕೆ ಫೆ.16ರಂದು ಉತ್ತರ ಸಿಗಲಿದೆ.

Leave a Reply

error: Content is protected !!
LATEST
ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು 15 ದಿನದ ಹಸುಳೆಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ - ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ವೈದ್ಯರ ಸಾಧನೆ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಸ್ತ್ರ: ಅಪರ ಸಿವಿಲ್ ನ್ಯಾಯಾಧೀಶೆ ಶಕುಂತಲಾ ಯೋಗ ಮಾಡಿ ಸಮೃದ್ಧ ಆರೋಗ್ಯವಂತ ಜೀವನ ನಡೆಸಿ: ಡಾ. ದಿವ್ಯಾ ಸಲಹೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ: ಎಎಪಿ ಆಕ್ರೋಶ KSRTC ಬಸ್‌ನಲ್ಲಿ ಪ್ರಯಾಣಿಸುವಾಗ ಟಿಕೆಟ್‌ ಕಳೆದುಕೊಂಡ ಮಹಿಳೆ: ತನಿಖಾಧಿಕಾರಿಗಳಿಗೆ ಹೆದರಿ ಬಸ್‌ನಿಂದ ಕೆಳಗಿಳಿಸಿದ ಕಂಡ... ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ