NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ರಾಜ್ಯ ಬಜೆಟ್‌: ಅಲ್ಪಸಂಖ್ಯಾತರಿಗೆ ಸಿಕ್ಕಿದ್ದೇನು?

ವಿಜಯಪಥ ಸಮಗ್ರ ಸುದ್ದಿ

ಕರ್ನಾಟಕ ರಾಜ್ಯ ಬಜೆಟ್‌ 2023-24: ವಕ್ಫ್ ಆಸ್ತಿ ರಕ್ಷಣೆ – 10 ಕೋಟಿ, ಖಬರಸ್ತಾನ ಅಭಿವೃದ್ಧಿ – 10 ಕೋಟಿ, ಅಲ್ಪಸಂಖ್ಯಾತ ಪದವೀಧರ ಮಹಿಳೆಯರಿಗೆ ಉದ್ಯೋಗ ಅವಕಾಶ – 3 ಕೋಟಿ, ಅಲ್ಪಸಂಖ್ಯಾತ ಅಭಿವೃದ್ದಿ ನಿಮಗಕ್ಕೆ – 306 ಕೋಟಿ. ಬೆಂಗಳೂರಲ್ಲಿ 20 ಸಾವಿರ ಮನೆಗಳ ನಿರ್ಮಾಣ ಪೂರ್ಣ, ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ.

GPS ಸಂವಹನ ವ್ಯವಸ್ಥೆ: ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ. ಗಳ ಅನುದಾನದಲ್ಲಿ ISRO ಅಭಿವೃದ್ಧಿಪಡಿಸಿರುವ GPS ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ನಮ್ಮ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು 10,000 ವಸತಿರಹಿತ ಮೀನುಗಾರರಿಗೆ ವಿಸ್ತರಿಸಲಾಗುವುದು.

ಪೆಟ್ರೋಲ್/ ಡೀಸೆಲ್‌ಆಧಾರಿತ ಮೋಟಾ‌ಇಂಜಿನ್ : ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ ಡೀಸೆಲ್‌ಆಧಾರಿತ ಮೋಟಾ‌ಇಂಜಿನ್ ಅನ್ನು ಅಳವಡಿಸಲು ತಲಾ 50 ಸಾವಿರ ರೂ.ನಂತೆ ಸಹಾಯಧನ ನೀಡಲಾಗುವುದು.

ಅದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಗಳನ್ನು ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ ವರ್ಷಗಳ ಅವಧಿಗೆ 2 ಸೀಮೆಎಣ್ಣೆ ಸಹಾಯಧನ ಮುಂದುವರೆಸಲಾಗುವುದು.

ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ನೀಡುತ್ತಿರುವ ಡೀಸೆಲ್‌ನ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಹೆಚ್ಚಿಸಲಾಗುವುದು. ಇದರಿಂದ ಕಿಲೋ ದರದಲ್ಲಿ ಲೀಟರ್‌ಗಳವರೆಗೆ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ.

ಮೀನುಗಾರರಿಗೆ ನೀಡುತ್ತಿರುವ ಸೀಮೆ ಎಣ್ಣೆ ಸಹಾಯಧನದ ಪ್ರಕ್ರಿಯೆಯನ್ನು ಸರಳೀಕರಿಸಿ ನೇರವಾಗಿ ಪ್ರಸಕ್ತ ಮೀನುಗಾರರ ಸಾಲಿನಿಂದ ಖಾತೆಗೆ ಜಮೆ ಮಾಡಲಾಗುತ್ತದೆ.

ಮತ್ಸ್ಯ ಸಿರಿ ವಿಶೇಷ ಯೋಜನೆ: ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ (Deep sea fishing boats) ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಮತ್ಸ್ಯ ಸಿರಿ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ದೋಣಿ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

ಸೀಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕಲ್ಯಾಣ ಕರ್ನಾಟಕ ಭಾಗ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು.

ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್ ಕರೆಯಲಾಗಿದೆ. ಇದರಿಂದ ಮೀನುಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ.

ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲ್ಲೂಕಿನ ಕಂಬದಕೋಣೆಯಲ್ಲಿ Seafood Park ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಆವರ್ತ ನಿಧಿಗೆ ಬಲ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಧಾನ್ಯಗಳಿಗೆ, ರೈತರಿಗೆ ತ್ವರಿತವಾಗಿ ಹಣಪಾವತಿ ಮಾಡಲು ಸ್ಥಾಪಿಸಿರುವ ಆವರ್ತ ನಿಧಿಯನ್ನು ನಮ್ಮ ಸರ್ಕಾರದ ಕಾಲಾವಧಿಯಲ್ಲಿ 2,000 ಕೋಟಿ ಗಳವರೆಗೆ ಹೆಚ್ಚಿಸಲಾಗುವುದೆಂದು 2020-21ನೇ ಸಾಲಿನಲ್ಲಿ ಘೋಷಿಸಲಾಗಿತ್ತು.

ಪ್ರಸ್ತುತ ಆವರ್ತ ನಿಧಿ ಮತ್ತು ಕರ್ನಾಟಕ ಆಹಾರ ನಿಗಮಕ್ಕೆ ಧಾನ್ಯಗಳ ಖರೀದಿಗೆ ಬಿಡುಗಡೆ ಮಾಡಿರುವ ಅನುದಾನ ಸೇರಿ ಒಟ್ಟು 1,000 ಕೋಟಿ ರೂ. ಗಳಿದ್ದು, 2022-23ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 1,000 ಕೋಟಿ ಗಳನ್ನು ಒದಗಿಸಲಾಗಿದೆ. ಪ್ರಸಕ್ತ ಆಯವ್ಯಯದಲ್ಲಿ 1,500 ಕೋಟಿ ರೂ. ಗಳನ್ನು ಒದಗಿಸಿ, 3,500 ಕೋಟಿ ಗಳಿಗೆ ಏರಿಸಲಾಗುವುದು.

ಭೂಸ್ವಾಧೀನಕ್ಕೆ ಏಕರೂಪ ದರ ನಿಗದಿ: ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಹಲವಾರು ವರ್ಷಗಳಿಂದ ನನೆಗುದಿಯಲ್ಲಿದ್ದ ಭೂಸ್ವಾಧೀನಕ್ಕೆ ಏಕರೂಪ ದರ ನಿಗದಿಪಡಿಸುವ ಸಂಬಂಧದಲ್ಲಿ ಒಪ್ಪಂದದ ಐತೀರ್ಪನ್ನು ರಚಿಸುವ ಕುರಿತು ಪ್ರಸಕ್ತ ಸರ್ಕಾರವು ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಇದರಿಂದ ರೈತರು ಹಾಗೂ ಭೂಮಾಲೀಕರಿಗೆ ಶೀಘ್ರ ಭೂ ಪರಿಹಾರ ಸಿಗಲಿದೆ.

ಜುಲೈ 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ನೀರಾವರಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲಾಗಿದೆ. ಅವಧಿಯಲ್ಲಿ ಒಟ್ಟಾರೆಯಾಗಿ ಸುಮಾರು 1.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.

ಕೆ.ಸಿ.ವ್ಯಾಲಿ ಮತ್ತು ವಿವಿಧ ಯೋಜನೆಗಳ ಮೂಲಕ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬೆಂಗಳೂರು ನಗರದ ಸುತ್ತಮುತ್ತಲಿನ ಅಂತರ್ಜಲ ಕ್ಷೀಣಿಸಿರುವ ಪ್ರದೇಶಗಳಲ್ಲಿ ನೀರು ಹರಿಸುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಸಂಸ್ಕರಿಸಿದ ನೀರಿನ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಿ ಕೃಷಿಗೆ ಯೋಗ್ಯವನ್ನಾಗಿ ಮಾಡಲು Tertiary ಮಾದರಿಯ ಸಂಸ್ಕರಣಾ ಕ್ರಮಗಳನ್ನು ಅಳವಡಿಸಲಾಗುವುದು.

ಸಮುದ್ರಕ್ಕೆ ಸೇರುವ ನೀರನ್ನು ತಡೆಹಿಡಿದು ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿಗೆ ಪಶ್ಚಿಮವಾಹಿನಿ ರೂಪಿಸಲಾಗಿರುವ ಯೋಜನೆಯ ಉಪಯೋಗಿಸಲು 2ನೇ ಹಂತದಡಿ ಅನುಮೋದನೆಯಾಗಿರುವ 29, 378 ಕೋಟಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – ಹರ್ ಖೇತ್ ಕೊ ಪಾನಿ (PMKSY-HKKP) ಅಡಿ ಬರ ಪೀಡಿತ ಜಿಲ್ಲೆಗಳಾದ ಯಾದಗಿರಿ ಮತ್ತು ಕಲಬುರಗಿಯಲ್ಲಿ ಅಂತರ್ಜಲವನ್ನು ವೃದ್ಧಿಗೊಳಿಸಲು 443 ಕೋಟಿ ರೂ. ಮೊತ್ತದಲ್ಲಿ 138 ಮೇಲೆ ಸಣ್ಣ ನೀರಾವರಿ (Surface Minor Irrigation) ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿ ಪುಷ್ಪಗಳ ರಪ್ತಿಗೆ ವಿಫುಲ ಅವಕಾಶ ಇರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ, ಬೆಂಗಳೂರು ಮತ್ತು ಹಾವೇರಿಯಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಹೂವಿನ ಚಿಲ್ಲರೆ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

ಕಳೆದ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, ಯಶಸ್ವಿನಿ ಯೋಜನೆಯನ್ನು ಮರುಜಾರಿಗೊಳಿಸಲಾಗುತ್ತದೆ. ಪ್ರಸ್ತುತ 32 ಲಕ್ಷ ರೈತರನ್ನು ನೋಂದಾಯಿಸಲಾಗಿದೆ. ಈಗಾಗಲೇ ರೈತರು ಈ ಯೋಜನೆಯ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39,031 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಿ ಉತ್ಪಾದನೆಯನ್ನು ಹೆಚ್ಚು ಮಾಡುವ ಉದ್ದೇಶಕ್ಕೆ ನಮ್ಮ ಸರ್ಕಾರ ಪ್ರಸಕ್ತ ವರ್ಷದಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ