NEWSಉದ್ಯೋಗನಮ್ಮಜಿಲ್ಲೆ

ನೌಕರರ ತುಟ್ಟಿಭತ್ಯೆ ಶೇ. 3.75ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಳ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಲೋಕಸಭೆ ಚುನಾವಣೆ ಅಧಿಸೂಚನೆ ಹೊರಡಿಸುವ ಮೊದಲೇ ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಸ್ತುತ ಇದ್ದ ಶೇ. 38.75 ರಿಂದ ಶೇ. 42.5ಕ್ಕೆ ಹೆಚ್ಚಳವಾದಂತಾಗಿದೆ.

01-01-2024ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು, ಕೇಂದ್ರ ವೇತನ ನೀತಿಯಂತೆ ವೇತನ ಪಡೆಯುವ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.3.75ರಷ್ಟು ಏರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು ಹೇಳಲಾಗಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು.

ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 4 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಪತ್ರ ಬರೆದು ಮನವಿ ಮಾಡಿತ್ತು. ಆದರೆ, 3.75% ರಷ್ಟು ಹೆಚ್ಚಿಸಿ ಆದೇಶ ಹೊರಿಡಿಸಿದೆ ರಾಜ್ಯಸರ್ಕಾರ.

ಇನ್ನು ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ