NEWSನಮ್ಮರಾಜ್ಯಶಿಕ್ಷಣ

ರಾಜ್ಯ ಮುಕ್ತ ವಿಶ್ವವಿದ್ಯಾಲಯ: ಪರೀಕ್ಷಾ ಶುಲ್ಕ ಪಾವತಿಗೆ ಮಾ.30ರವರೆಗೆ ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2018-19 ರಿಂದ 2024-25ನೇ ಸಾಲಿನ ವರೆಗಿನ ನಾನ್ ಸಿಬಿಸಿಎಸ್ ಹಾಗೂ 2021-22 ರಿಂದ 2024-25ನೇ ಶೈಕ್ಷಣಿಕ ಸಾಲುಗಳ ಜುಲೈ/ ಜನವರಿ ಆವೃತ್ತಿ ಮತ್ತು 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಸಿಬಿಸಿಎಸ್ ಯು.ಜಿ. /ಪಿ.ಜಿ./ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಮಾರ್ಚ್ 30 ವರೆಗೆ ಅವಕಾಶ ಕಲ್ಪಿಸಲಾಗಿದೆ.

ಅವಧಿ ಮುಗಿದ ನಂತರ ಏಪ್ರಿಲ್ 6ರ ವರೆಗೂ ರೂ.200 ರೂ. ದಂಡ ದೊಂದಿಗೆ ಶುಲ್ಕ ಪಾವತಿಸಲು ಅವಕಾಶವಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ಮೂಲಕವೇ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26.

ಕಚೇರಿ ದೂರವಾಣಿ ಸಂಖ್ಯೆ: 080-2660 3664 ಹಾಗೂ 98805-26439/ 90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಡಾ.ಎಚ್‌.ಎಸ್‌. ರೋಹಿತ್ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!