NEWSನಮ್ಮರಾಜ್ಯರಾಜಕೀಯ

ತಳಮಟ್ಟದಿಂದ ಎಎಪಿ ಪಕ್ಷಸಂಘಟನೆಗೆ ರಾಜ್ಯ ಪರ್ಯಾಟನೆ: ಕಲ್ಯಾಣ ಕರ್ನಾಟಕ ಪ್ರವಾಸದಲ್ಲಿ ಮುಖ್ಯಮಂತ್ರಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ಮೂಲಕ ರಾಜ್ಯದಲ್ಲಿ ಪರ್ಯಾಯ ಶಕ್ತಿಯಾಗಿ ಅಧಿಕಾರ ಸ್ಥಾಪಿಸುವ ಗುರಿಯೊಂದಿಗೆ ಹೆಜ್ಜೆಯಿಟ್ಟಿರುವ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಕಲ್ಯಾಣ ಕರ್ನಾಟಕದ ಮೂರು ಜಿಲ್ಲೆಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

ಭಾನುವಾರ ನಗರದಲ್ಲಿ ಹಿಂದುಳಿದ ವರ್ಗಗಳ ನಾಯಕರ ಜತೆ ಸಭೆ ನಡೆಸಿದ್ದು, ಜನವರಿ 29 ರಿಂದ ಪ್ರವಾಸದಲ್ಲಿ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಆಯಾ ಜಿಲ್ಲೆಯ ಸ್ಥಳೀಯ ಮಟ್ಟದ ಮುಖಂಡರನ್ನು ಭೇಟಿಯಾಗಿ, ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ.

ಜ. 29 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬೀದರ್ ಜಿಲ್ಲೆಗೆ ಭೇಟಿ ನೀಡಲಿರುವ ಅವರು, 11 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪಕ್ಷದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಮಂಗಳಗಿ ಗ್ರಾಮದಲ್ಲಿ ಅರಳಿಕಟ್ಟೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ 8 ಗಂಟೆಗೆ ಕಲಬುರಗಿಗೆ ತೆರಳಲಿದ್ದು, ಅಲ್ಲಿ ತಂಗಲಿದ್ದಾರೆ.

ಜನವರಿ 30 ರಂದು ಮುಖ್ಯಮಂತ್ರಿ ಚಂದ್ರು ಬೆಳಗ್ಗೆ ಕಲಬುರಗಿಯಲ್ಲಿ 11 ಗಂಟೆಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ 12 ರಿಂದ 2 ಗಂಟೆಯವರೆಗೆ ಎಂಎಲ್‌ಸಿ ಪದವೀಧರರ ಕ್ಷೇತ್ರದ ಸಭೆ ನಡೆಯಲಿದ್ದು, ಅಭ್ಯರ್ಥಿ ಪ್ರತಾಪ್ ರೆಡ್ಡಿ ಮತ್ತು 7 ಜಿಲ್ಲಾಧ್ಯಕ್ಷರ ಜೊತೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮುಖಂಡರ ಜೊತೆ ಸಭೆ ನಡೆಸಲಿದ್ದು, ಸಂಜೆ 4.30ಕ್ಕೆ ಕಲಬುರಗಿಯ ವಿವೇಕಾನಂದ ನಗರದಲ್ಲಿ ಅರಳಿಕಟ್ಟೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಯಾದಗಿರಿಗೆ ತೆರಳಲಿದ್ದಾರೆ.

ಪ್ರವಾಸದ ಕೊನೇ ದಿನ ಜ.31ರಂದು ಯಾದಗಿರಿ ಜಿಲ್ಲೆಗೆ ಭೇಟಿ ನೀಡಲಿರುವ ಅವರು ಬೆಳಗ್ಗೆ 9 ಗಂಟೆಗೆ ಮಾದನಪುರಕ್ಕೆ ತೆರಳಲಿದ್ದಾರೆ. 11 ಗಂಟೆಗೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶಹಾಪುರದ ಸಿಪಿಎಸ್ ಶಾಲಾ ಮೈದಾನದಲ್ಲಿ ಅರಳಿಕಟ್ಟೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗದಲ್ಲಿ ಭಾನುವಾರ ಆಯೋಜಿಸಿದ್ದ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯ ಮಂತ್ರಿ ಚಂದ್ರು ಇತರರು ಭಾಗಿಯಾಗಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ