NEWSಕೃಷಿನಮ್ಮಜಿಲ್ಲೆ

ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ರೈತರ ಆಕ್ರೋಶ ದಿನ, ಪಂಜಿನ ಪ್ರತಿಭಟನಾ ಮೆರವಣಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದ ರೈತರ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ಪಂಜಾಬ್, ಹರಿಯಾಣ ರೈತರ ಮೇಲೆ ಪೊಲೀಸ್ ಗೋಲಿಬಾರ್ ಮಾಡಿ ರೈತ ಶುಭಕರಣ್ ಸಿಂಗ್ ಪ್ರಾಣ ತೆಗೆದ ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯದ್ಯಂತ ರೈತರ ಆಕ್ರೋಶ ದಿನ, ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಿತು.

ಅದರಂತೆ ಇಂದು ಬೆಂಗಳೂರಿನಲ್ಲಿ ರೈತರತ್ನ ಕುರುಬೂರು ಶಾಂತಕುಮಾರ್‌ ನೇತೃತ್ವದಲ್ಲಿ ರೈತರ ಆಕ್ರೋಶ ದಿನ, ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ಕೇಂದ್ರ ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕುವ ಬದಲು, ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗಾಗಿ, ರೈತರ ಸಂಪೂರ್ಣ ಕೃಷಿ ಸಾಲ ಮನ್ನಕ್ಕಾಗಿ, ಸಂಕಷ್ಟ ಕಾಲದಲ್ಲೂ ಬ್ಯಾಂಕುಗಳು ರೈತರಿಗೆ ಸಾಲ ವಸುಲಿಗಾಗಿ ನೋಟಿಸ್ ನೀಡುತ್ತಿವೆ, ಇದು ನಿಲ್ಲಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಮಾರ್ಚ್ 12 ರ ಸಂಜೆ 6 ಗಂಟೆಯಲ್ಲಿ ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ರೈತರು ಬೃಹತ್ ಪಂಜಿನ ಪ್ರತಿಭಟನೆ ನಡೆಸಿದರು. ಅದರಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳ ರೈತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ವಿ.ಆರ್. ನಾರಾಯಣರೆಡ್ಡಿ , ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ಕನ್ನಡ ಚಳವಳಿಯ ಗುರುದೇವ್ ನಾರಾಯಣ್ ಕುಮಾರ್, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜೇಶ್ ಜಿಲ್ಲಾ ಮಹಿಳಾ ಅಧ್ಯಕ್ಷೆ ಕಮಲಮ್ಮ, ಬರಡನಪುರ ನಾಗರಾಜ್, ಗಜೇಂದ್ರ ಮತ್ತಿತರರು ಇದ್ದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ