Breaking NewsNEWSನಮ್ಮರಾಜ್ಯ

ಗ್ರಾಪಂಗಳಲ್ಲಿ ವೈಜ್ಞಾನಿಕ-ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮ: ಸಿಇಒ ಅನುರಾಧ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993 ಕಲಂ 199ರಡಿ ವೈಜ್ಞಾನಿಕ ಮತ್ತು ಏಕರೂಪ ಆಸ್ತಿ ತೆರಿಗೆ ಸಂಗ್ರಹಕ್ಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ.

ಎಲ್ಲಾ ಗ್ರಾಮ ಪಂಚಾಯಿತಿಗಳು ಗ್ರಾಮ ಪಂಚಾಯತಿ ತೆರಿಗೆ ವ್ಯಾಪ್ತಿಗೆ ಒಳಪಡುವ ಆಸ್ತಿಗಳಿಗೆ ಆಸ್ತಿ ತೆರಿಗೆಯನ್ನು ವಿಧಿಸುತ್ತವೆ. ಗ್ರಾಮ ಪಂಚಾಯಿತಿಗಳಲ್ಲಿ ವೈಜ್ಞಾನಿಕವಾಗಿ ಆಸ್ತಿ ತೆರಿಗೆ ಸಂಗ್ರಹ ಮಾಡಲು ಬಾಪೂಜಿ ಸೇವಾ ಕೇಂದ್ರ ಮತ್ತು ಪಂಚತಂತ್ರ 2.0 ತಂತ್ರಾಂಶದ ಮೂಲಕ ಸೇವೆಯನ್ನು ನೀಡಲಾಗುತ್ತಿದೆ ಎಂದರು.

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಆಸ್ತಿಗಳ ವಿವರವನ್ನು ತಂತ್ರಾಂಶದಲ್ಲಿ ಅಳವಡಿಸಿಕೊಂಡು ಸರ್ಕಾರದ ಸುತ್ತೋಲೆಯಂತೆ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವ ಆಸ್ತಿಗಳನ್ನು ಕೂಡ ನಿಯಾಮಾನುಸಾರ ತಂತ್ರಾಂಶದಲ್ಲಿ ಇಂಡೀಕರಿಸುತ್ತ ಕಂದಾಯ ವಸೂಲಾತಿ ಅಂದೋಲನಗಳನ್ನು ಆಯೋಜಿಸಿಕೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಳೆದ ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಶೇ.75 ರಷ್ಟು ಕಂದಾಯ ವಸೂಲಾತಿಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು 2024-25ನೇ ಸಾಲಿನಲ್ಲಿ ಶೇ.88 ರಷ್ಟು ಕಂದಾಯ ವಸೂಲಾತಿಯಾಗಿದ್ದು ಮುಂದುವರಿದು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ POS ಮಷೀನ್‌ ಬಳಸಿಕೊಂಡು ಪ್ರಸ್ತುತ 2025-26ನೇ ಸಾಲಿನಲ್ಲಿ 100% ಕಂದಾಯ ವಸೂಲಾತಿಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಡಿಜಿಟಲ್‌ ಸೇವೆ: ಗ್ರಾಮ ಪಂಚಾಯಿತಿಯು ಆಧುನಿಕತೆ ಬೆಳೆದಂತೆಲ್ಲ ಆಸ್ತಿ ತೆರಿಗೆಯನ್ನು ಆನ್‌ ಲೈನ್ ಮೂಲಕ ಪಾವತಿಸುವ ಸೌಲಭ್ಯಗಳನ್ನು ಸಹನೀಡಲಾಗುತ್ತಿದ್ದು ಸಾರ್ವಜನಿಕರು ಕಂದಾಯವನ್ನು ತಾವು ಇರುವಲ್ಲಿಯೇ ತೆರಿಗೆಯನ್ನು ಪಾವತಿಸಬಹುದು ಇದರಿಂದ ಸಮಯ ಮತ್ತು ಪಾರದರ್ಶಕತೆ ಹಾಗೂ ತಮ್ಮ ಬಾಕಿ ಎಷ್ಟು ಇದೆ ಎಂದು ಆನ್‌ ಲೈನ್‌ ನಲ್ಲಿಯೇ ಪರಿಶೀಲನೆ ಮಾಡಿಕೊಂಡು ತೆರಿಗೆಯನ್ನು ಪಾವತಿಸಬಹುದು.

ಅಧಿಕೃತ ವೆಬ್ ಸೈಟ್ ಗೆ https://bsk.karnataka.gov.in ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ, ಪೋನ್‌ ಪೇ, ಗೂಗಲ್‌ ಪೇ ಮೂಲಕ ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ಪಾವತಿ ಮಾಡಬಹುದಾಗಿದೆ.

ಕಂದಾಯ ವಸೂಲಾತಿಗೆ ವಿಶೇಷ ಅಭಿಯಾನವು ಏಪ್ರಿಲ್‌ 01 ರಿಂದ ಜೂನ್‌ 30, 2025 ರವರಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿದ್ದು ಇದರ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತೆರಿಗೆಯನ್ನು ಪಾವತಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಿಇಒ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ