NEWSನಮ್ಮಜಿಲ್ಲೆ

ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದವು- ತಮಗಾದ ಅನುಭವ ಹಂಚಿಕೊಂಡ ದಾವಣಗೆರೆ ಡಿಸಿ

ವಿಜಯಪಥ - vijayapatha.in
ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಜನಸಾಮಾನ್ಯರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ಈ ನಾಯಿಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವರು ಎಂದರು.

ಇನ್ನು ಈ ವೇಳೆ, ಜಿಲ್ಲೆಯಲ್ಲಿ ವರ್ಷಕ್ಕೆ 5 ರಿಂದ 6 ಸಾವಿರ ಜನರು ಈ ಬೀದಿ ನಾಯಿಗಳ ದಾಳಿಗೆ ತುತ್ತಾಗುತ್ತಿದ್ದಾರೆ. ನನಗೂ ಅದರ ಅನುಭವ ಆಗಿದೆ. ಬೆಳಗ್ಗೆ ಜಾಗಿಂಗ್ ಹೋಗುತ್ತಿದ್ದಾಗ ಐದಾರು ನಾಯಿಗಳು ನನ್ನನ್ನು ಅಟ್ಟಾಡಿಸಿಕೊಂಡು ಬಂದಿದ್ದವು. ಅವುಗಳನ್ನು ನಾನು ಕಲ್ಲು ತೆಗೆದುಕೊಂಡು ಓಡಿಸಿದ್ದೆ ಎಂದು ಹೇಳಿದ್ದಾರೆ.

ಈಗಾಗಲೇ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸಲು ಸಭೆ ಕರೆಯಲಾಗಿದೆ.‌ ನಗರ ಹಾಗೂ ತಾಲೂಕು ಮಟ್ಟದಲ್ಲಿ ಕೂಡ ಸಭೆ ನಡೆಸಲಾಗಿದೆ ಎಂದ ಅವರು, ಏಡ್ಸ್ ಕಾಯಿಲೆ ಬಂದರೂ 10-50 ವರ್ಷ ಮನುಷ್ಯ ಬದುಕುತ್ತಾನೆ. ಆದರೆ ನಾಯಿ ಕಡಿತ ಅದಕ್ಕಿಂತ ಗಂಭೀರವಾದದ್ದು ಎಂದರು.

ಇನ್ನು ನಾಯಿ ಕಡಿತಕ್ಕೆ ಪೂರ್ಣ ಪ್ರಮಾಣದ ಔಷಧಿಯೇ ಇಲ್ಲ. ಹಾಗಾಗಿ ತಡೆಗಟ್ಟಲು ಅಗತ್ಯವಾದ ಕ್ರಮ ಕೈಗೊಳ್ಳಲಾಗಿದೆ. ನಾಯಿಗಳನ್ನು ಕೊಲ್ಲಲು ಬರುವುದಿಲ್ಲ. ಹಾಗಾಗಿ ಎನ್‌ಜಿಒ ಜತೆ ಮಾತನಾಡಲಾಗಿದೆ ಅವುಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.

Megha
the authorMegha

Leave a Reply

error: Content is protected !!