NEWSದೇಶ-ವಿದೇಶ

ಮೊರಾಕೊದಲ್ಲಿ ಪ್ರಬಲ ಭೂಕಂಪ: 310 ಜನ ಮೃತ, ಸಾವಿರಾರು ಜನರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ರಬತ್: ಶುಕ್ರವಾರ ತಡರಾತ್ರಿ ಮೊರಾಕೊದಲ್ಲಿ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿ 310 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಸಾವಿರಾರು ಜನರು ಗಾಯಗೊಂಡಿದ್ದಾರೆ.

US ಭೂ ವೈಜ್ಞಾನಿಕ ಸಮೀಕ್ಷೆ ಪ್ರಕಾರ ತಡರಾತ್ರಿ ಮೊರೊಕಾದಲ್ಲಿ ಭೂಕಂಪವು ಮರಕೇಶ್‌ನ ನೈಋತ್ಯಕ್ಕೆ 71 ಕಿಲೋ ಮೀಟರ್ ವೇಗದಲ್ಲಿ 18.5 ಕಿಲೋಮೀಟರ್ ಆಳದಲ್ಲಿ ರಾತ್ರಿ 11:11ಕ್ಕೆ ಅಪ್ಪಳಿಸಿದೆ. ಇದರಿಂದ ಸುಮಾರು 6.8 ತೀವ್ರತೆಯ ಪ್ರಬಲ ಭೂಕಂಪದಿಂದ 310 ಜನರು ಸಾವನ್ನಪ್ಪಿದ್ದು ಸಾವಿರಾರು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಅಲ್ಲದೇ ಮನೆಗಳು, ಕಟ್ಟಡಗಳು, ಅಪಾರ್ಟ್​ಮೆಂಟ್​ಗಳು ನೆಲಸಮವಾಗಿದ್ದು ಕಟ್ಟಡದ ಅಡಿಯಲ್ಲಿ ಇನ್ನು ಜನರು ಸಿಲುಕಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಇದರಿಂದ ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ರಾತ್ರೋರಾತ್ರಿ ಭೂಕಂಪ ಸಂಭವಿಸಿದ್ದರಿಂದ ಭಯಭೀತರಾದ ಜನರು ನಿದ್ದೆಯಿಂದ ಎದ್ದು ರಸ್ತೆಗೆ ಓಡಿ ಬಂದಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ರಾತ್ರಿ ರಸ್ತೆ ಬದಿಯೇ ಸಮಯ ಕಳೆದಿದ್ದಾರೆ. ಕರಾವಳಿ ನಗರಗಳಾದ ರಬತ್, ಕಾಸಾಬ್ಲಾಂಕಾ ಮತ್ತು ಎಸ್ಸೌಯಿರಾಗಳಲ್ಲಿ ಭೂಕಂಪನದ ಅನುಭವವಾಗಿದೆ.

ಭೂಕಂಪದಿಂದಾಗಿ ನಗರದಲ್ಲಿ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ಸ್ಥಗಿತಗೊಂಡಿದೆ. ಈಗ ತಾತ್ಕಾಲಿಕ ನೆಟ್‍ವರ್ಕ್ ವ್ಯವಸ್ಥೆ ಮಾಡಲಾಗಿದೆ. ಅವಶೇಷಗಳ ಅಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೆರೆಯ ಅಲ್ಜೀರಿಯಾದಲ್ಲಿಯೂ ಭೂಕಂಪದ ಅನುಭವವಾಗಿದ್ದು, ಯಾವುದೇ ಹಾನಿ ಅಥವಾ ಸಾವುನೋವುಗಳನ್ನು ಉಂಟುಮಾಡಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

2004 ರಲ್ಲಿ ಈಶಾನ್ಯ ಮೊರಾಕ್ಕೋದ ಅಲ್ ಹೋಸಿಮಾದಲ್ಲಿ ಭೂಕಂಪ ಸಂಭವಿಸಿದಾಗ ಕನಿಷ್ಠ 628 ಜನರು ಸಾವನ್ನಪ್ಪಿದ್ದರು ಮತ್ತು 926 ಜನರು ಗಾಯಗೊಂಡಿದ್ದರು. 1980 ರಲ್ಲಿ ನೆರೆಯ ಅಲ್ಜೀರಿಯಾದಲ್ಲಿ (Algeria) 7.3 ತೀವ್ರತೆಯ ಭೂಕಂಪವು 2,500 ಜನರ ಸಾವಿಗೆ ಕಾರಣವಾಗಿತ್ತು. ಅಲ್ಲದೇ ಕನಿಷ್ಠ 3 ಲಕ್ಷ ಜನರನ್ನು ನಿರಾಶ್ರಿತರನ್ನಾಗಿ ಮಾಡಿತ್ತು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು