NEWSನಮ್ಮಜಿಲ್ಲೆಶಿಕ್ಷಣ-

ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಜಿಲ್ಲಾಧಿಕಾರಿ ಆರ್.ಲತಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸೃಜನಶೀಲತೆ, ಬೆಳೆಯಲು ವಿದ್ಯಾರ್ಥಿಗಳು ಕಲೆ ಸಾಹಿತ್ಯ, ವಿಜ್ಞಾನ ಸೇರಿದಂತೆ ಉತ್ತಮ ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ ಸಲಹೆ ನೀಡಿದ್ದಾರೆ.

ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ “ಉಚಿತ ಪುಸ್ತಕ ವಿತರಣಾ” ಕಾರ್ಯಕ್ರಮದಲ್ಲಿ ಪುಸ್ತಕ ನೀಡುವ ಮೂಲಕ ಜಿಲ್ಲೆಯಾದ್ಯಂತ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಗೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾಡಳಿತದಿಂದ ನಡೆದ “ಜ್ಞಾನವೃಕ್ಷ – ನಮ್ಮ ಒಂದು ಪುಸ್ತಕದ ಕೊಡುಗೆ ನಮ್ಮ ಮಕ್ಕಳ ಜ್ಞಾನದ ಹಾದಿಗೆ” ಎಂಬ ಅಭಿಯಾನದಡಿ ಅಧಿಕಾರಿಗಳು, ಸಿಬ್ಬಂದಿ, ದಾನಿಗಳು ಹಾಗೂ ಜಿಲ್ಲಾ ಗ್ರಂಥಾಲಯ ಇಲಾಖೆ ವತಿಯಿಂದ ಸಂಗ್ರಹವಾದ ಗ್ರಂಥಗಳು, ಪುಸ್ತಕಗಳನ್ನು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಉಚಿತ ಪುಸ್ತಕಗಳನ್ನು ಶಾಲಾ-ಕಾಲೇಜುಗಳ ಗ್ರಂಥಾಲಯದಲ್ಲಿರಿಸಿ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಬೇಕು ಎಂದು ಶಾಲಾ ಶಿಕ್ಷಕರಿಗೂ ಸಲಹೆ ನೀಡಿದರು.

ಇನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಟ್ಟ ಪುಸ್ತಕಗಳನ್ನು ಸರಿಯಾಗಿ ಸದುಯೋಗಪಡಿಸಿಕೊಂಡು ಅಭ್ಯಾಸ ಮಾಡಿ 2022-23ನೇ ಸಾಲಿನ ಎಸ್‌ಎಸ್‌ಎಲ್‌‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ನಾಲ್ಕು ಸಾವಿರ ಪುಸ್ತಕಗಳನ್ನು ಕೊಡುವ ಗುರಿ ಹೊಂದಿದೆ. ಇಂದು ಈ ಶಾಲೆಗೆ 400 ಪುಸ್ತಕಗಳನ್ನು ನೀಡಲಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ನೀಡುವ ಮೂಲಕ ವಿದ್ಯಾರ್ಥಿ ಸಮುದಾಯದಲ್ಲಿ ಜ್ಞಾನಾರ್ಜನೆ ವೃದ್ಧಿಸಬೇಕೆಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಹೀಗಾಗಿ ಕೊಟ್ಟ ಪುಸ್ತಕಗಳನ್ನು ಸರಿಯಾಗಿ ಸದುಯೋಗಪಡಿಸಿಕೊಂಡು ಅಭ್ಯಾಸ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ಶಾಲೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ, ವಿಶ್ವನಾಥಪುರ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು, ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC