Please assign a menu to the primary menu location under menu

CrimeNEWSನಮ್ಮಜಿಲ್ಲೆ

ಪೊಲೀಸ್‌ ಆರಕ್ಷಕ ಉಪನಿರೀಕ್ಷಕರ ಪ್ರಕರಣ: ಅಮೃತ್‌ಪೌಲ್‌ ಜಾಮೀನು ಅರ್ಜಿ ತಿರಸ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೊಲೀಸ್‌ ಆರಕ್ಷಕ ಉಪನಿರೀಕ್ಷಕರ (PSI) ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಹಾಗೂ ಅಮಾನತುಗೊಂಡಿರುವ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ಪೌಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ನಿನ್ನೆ ತಿರಸ್ಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ನ ನ್ಯಾಯಾಧೀಶ ಯಶವಂತ ಕುಮಾರ್‌ ಅರ್ಜಿ ತಿರಸ್ಕರಿಸಿದ್ದಾರೆ. PSI ಹಗರಣದಲ್ಲಿ ಅಮೃತ್‌ ಪೌಲ್‌ 35ನೇ ಆರೋಪಿಯಾಗಿದ್ದಾರೆ.

ಪ್ರಕರಣದಲ್ಲಿ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ಪೌಲ್‌ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜತೆಗೆ ಹಗರಣಕ್ಕೆ ಸಂಬಂಧಿಸಿದ ಸಿಸಿ ಕ್ಯಾಮರಾ ದೃಶ್ಯಗಳನ್ನು ವಿಶ್ಲೇಷಣೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಸಿಐಡಿ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

ಈ ಹಿನ್ನೆಲೆಯಲ್ಲಿ ಕೋರ್ಟ್‌ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿತಿರಸ್ಕರಿಸಿ ಆದೇಶಿಸಿದೆ. ಕಳೆದ ಜುಲೈ 25ರಂದು 1ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಸೆಷನ್ಸ್‌ ಕೋರ್ಟ್‌ ಮೆಟ್ಟಿಲೇರಿದ್ದರು.

ಇದೀಗ ಅಲ್ಲಿಯೂ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಹೈಕೋರ್ಟ್‌ ಮೊರೆ ಹೋಗುವ ಸಾಧ್ಯತೆಗಳಿವೆ

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ